10:11 AM Monday23 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶಿವಳ್ಳಿ ಕ್ರೀಡೋತ್ಸವ

19/05/2024, 00:04

ಮಂಗಳೂರು(reporterkarnataka.com): ಮಂಗಳೂರು ಶಿವಳ್ಳಿ ಸ್ಪಂದನ ಕ್ರೀಡೋತ್ಸವ 2024 ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಿತು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಆಡಳಿತ ಮುಕ್ತೇಸರ ಹಾಗೂ ಅನುವಂಶಿಗೆ ಅರ್ಚಕ ವೇದಮೂರ್ತಿ ವಾಸುದೇವ ಆಸ್ರಣ್ಣ ಉದ್ಘಾಟಿಸಿದರು.


ಮಂಗಳೂರಿನ 13 ವಲಯಗಳ ಕುಟುಂಬದ ಸದಸ್ಯರುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡಾ ಸ್ಫೂರ್ತಿ ಮೆರೆದರು.
ಸಮಾರೋಪ ಸಮಾರಂಭದಲ್ಲಿ ವೇದಮೂರ್ತಿ ವೆಂಕಟರಮಣ ಆಸ್ರಣ್ಣರು ಮಾತನಾಡಿ, ಕ್ರೀಡೆಯು ಸಮಗ್ರ ಶಿವಳ್ಳಿ ಬಾಂಧವರನ್ನು ಒಗ್ಗೂಡಿಸುವಲ್ಲಿ ಮಹತ್ತರ ಹೆಜ್ಜೆಯನ್ನು ಇರಿಸಿದೆ. ಕ್ರೀಡೆಯಿಂದಲೂ ನಮ್ಮ ಒಗ್ಗಟ್ಟನ್ನು ಪ್ರದರ್ಶಿಸಬಹುದು ಎಂದರು.
ಶಿವಳ್ಳಿ ಸ್ಪಂದನ ಅಧ್ಯಕ್ಷ ಕೆ.ಕೃಷ್ಣ ಭಟ್, ಸುಬ್ರಹ್ಮಣ್ಯ ಪ್ರಸಾದ್, ಮೋಹನ್ ರಾವ್ ಪಾವಂಜೆ, ಮಹಿಳಾ ಘಟಕ ಅಧ್ಯಕ್ಷೆ ರಮಾಮಣಿ, ಎಲ್ಲೂರು ರಾಮಚಂದ್ರ ಭಟ್, ದೀಪಾ ಕೆ. ಭಟ್, ಸಂಹಿತಾ ಅಲೆವೂರಾಯ, ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.
ಕಟೀಲು ವಲಯದ ಅಧ್ಯಕ್ಷ ಆನಂತ ಪದ್ಮನಾಭ ಆಚಾರ್ಯರು ವಂದಿಸಿದರು. ವಲಯ ಉಸ್ತುವಾರಿ ಪ್ರದೀಪ್ ಕುಮಾರ್ ರಾವ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು