10:11 AM Monday23 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಎಲೆಕ್ಷನ್: ಅನಿಲ್ ಕುಮಾರ್ ಟಿ.ಕೆ. ಹಾಗೂ ಹರ್ಷ ಗುಪ್ತ ಚುನಾವಣಾ ವೀಕ್ಷಕರಾಗಿ ನೇಮಕ

19/05/2024, 10:29

ಮಂಗಳೂರು(reporterkarnataka.com): ನೈಋತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈ,ಋತ್ಯ ಪದವೀಧರರ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಯ ಹಿನ್ನೆಲೆ ಭಾರತೀಯ ಚುನಾವಣಾ ಆಯೋಗವು ಹಿರಿಯ ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿದೆ.
ಕರ್ನಾಟಕ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಟಿ.ಕೆ. ಹಾಗೂ ಸಹಾಯಕ ಅಧಿಕಾರಿಯಾಗಿ ಮೈಸೂರು ಜಿಲ್ಲೆಯ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ರುದ್ರೇಶ್ ಕೆ ಅವರನ್ನು ನೇಮಕ ಮಾಡಲಾಗಿದೆ. ಮೊ.ಸಂಖ್ಯೆ: 7204064565 ಅನ್ನು ಸಂಪಕಿಸಬಹುದು.
ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ ಹರ್ಷ ಗುಪ್ತ ಹಾಗೂ ಸಹಾಯಕ ಅಧಿಕಾರಿಯಾಗಿ ಮೈಸೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ. ಸುದರ್ಶನ್ ಅವರನ್ನು ನೇಮಕ ಮಾಡಲಾಗಿದೆ. ಮೊ.ಸಂಖ್ಯೆ: 7204294565 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರೂ ಆಗಿರುವ ಡಾ ಜೆ.ಸಿ ಪ್ರಕಾಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು