ಇತ್ತೀಚಿನ ಸುದ್ದಿ
ಕಲ್ಲುಕೋರೆ ಪ್ರಕರಣ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ ಐಆರ್
19/05/2024, 21:49

ಬೆಳ್ತಂಗಡಿ (reporterkarnataka.com): ಬೆಳ್ತಂಗಡಿ ಪೊಲೀಸ್ ಠಾಣೆಗೆ ಹೋಗಿ ‘ಪೊಲೀಸ್
ಠಾಣೆ ನಿಮ್ಮ ಅಪ್ಪಂದಾ’ ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೆ ದಬಾಯಿಸಿದ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಅಕ್ರಮ ಕಲ್ಲುಕೋರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿದ್ದರು. ಅಮಾಯಕರನ್ನು ಬಂಧಿಸಲಾಗಿದೆ ಎಂದು ತಗಾದೆ ತೆಗೆದ ಶಾಸಕರು ಪೂಂಜ ಅವರು ಶಶಿರಾಜ್ ಶೆಟ್ಟಿ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಬೆಳ್ತಂಗಡಿ ಪಿಎಸ್ ಐ ಮುರಳೀಧರ ನಾಯಕ್ ಅವರಿಗೆ ಆವಾಜ್ ಹಾಕಿದ್ದರು. ಅಷ್ಟೇ ಅಲ್ಲದೆ ಶಾಸಕರು ಮತ್ತು ಕೆಲವು ಕಾರ್ಯಕರ್ತರು ರಾತ್ರಿಯಿಡೀ ಠಾಣೆ ಎದುರು ಧರಣಿ ಕುಳಿತ್ತಿದ್ದರು. ಆದರೆ ಪೊಲೀಸರು ಶಶಿರಾಜ್ ಶೆಟ್ಟಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.