8:19 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವರ ದುರ್ಮರಣ; ಅಣೆಕಟ್ಟನ್ನು ಉದ್ಘಾಟಿಸಿ ವಾಪಸಾಗುತ್ತಿದ್ದಾಗ ದುರ್ಘಟನೆ

20/05/2024, 10:38

ತಬ್ರಿಜ್ಗೆ(reporterkarnataka.com): ಬೆಟ್ಟ ಪ್ರದೇಶದಲ್ಲಿ ತಾನು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡ ಹಿನ್ನೆಲೆಯಲ್ಲಿ
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸಂಪರ್ಕ ಕಳೆದುಕೊಂಡಿದ್ದ ಅವರ ಹೆಲಿಕಾಪ್ಟರ್ ಪತನಗೊಂಡಿದ್ದು ಪತ್ತೆಯಾಗಿದ್ದು, ಹೆಲಿಕಾಪ್ಟರ್ ನಲ್ಲಿರುವ ಯಾರೂ ಬದುಕುಳಿದಿರುವ ಸಾಧ್ಯತೆಗಳಿಲ್ಲ ಎಂದು ಅಲ್ಲಿನ ಟಿವಿ ವರದಿ ಮಾಡಿದೆ.
ಹೆಲಿಕಾಪ್ಟರ್ ಪತ್ತೆಯಾಗಿದೆ ಆದರೆ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಇರಾನ್ನ ರೆಡ್ ಕ್ರೆಸೆಂಟ್ ಮುಖ್ಯಸ್ಥರು ಹೇಳಿದ್ದಾರೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವ ಹುಸೇನ್ ಅಮಿರಾಬ್ಡೊಲ್ಲಿಯನ್ ಅವರು ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು.
ಇರಾನ್ ಅಧ್ಯಕ್ಷ ರೈಸಿ ಮತ್ತು ಅಜೆರ್ಬೈಜಾನ್ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ತಮ್ಮ ಹಂಚಿಕೆಯ ಗಡಿಯಲ್ಲಿರುವ ಕ್ವಿಜ್ ಖಲಾಸಿ ಅಣೆಕಟ್ಟನ್ನು ಉದ್ಘಾಟಿಸಿದ ನಂತರ ಅಧ್ಯಕ್ಷ ರೈಸಿ, ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದೊಲ್ಲಾಹಿಯಾನ್ ಮತ್ತು ಇತರ ಅಧಿಕಾರಿಗಳನ್ನು ಹೊತ್ತ ಹೆಲಿಕಾಪ್ಟರ್ ಇರಾನ್ ನಗರ ತಬ್ರಿಜ್ಗೆ ಹೊರಟಿತ್ತು. ಹೆಲಿಕಾಪ್ಟರ್ ಟೇಕ್ ಆಪ್ ಆಗಿ ಸುಮಾರು 30 ನಿಮಿಷಗಳ ನಂತರ ಸಂಪರ್ಕವನ್ನು ಕಳೆದುಕೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು