3:28 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಬಂಟ್ವಾಳದಲ್ಲಿ ಪತ್ತನಾಜೆ ಹಬ್ಬ: ಜಾನಪದ ಸಂಸ್ಕೃತಿ ಉಳಿಸಿಸಲು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಜೋಗತಿ ಮಂಜಮ್ಮ ಕರೆ

20/05/2024, 14:10

ಬಂಟ್ವಾಳ(reporterkarnataka.com): ಮಕ್ಕಳನ್ನು ಕಡ್ಡಾಯವಾಗಿ ಕನ್ನಡ ಶಾಲೆಯಲ್ಲಿ 10ನೇ ತರಗತಿವರೆಗೆ ಓದಿಸಿದರೆ ನಮ್ಮ ಭಾಷೆ,ಸಂಸ್ಕಾರ,ಸಂಸ್ಕೃತಿ ಉಳಿಯುತ್ತದೆ. ಮಕ್ಕಳಲ್ಲಿ ಓದುವ‌ ಹವ್ಯಾಸವನ್ನು ಬೆಳೆಸಿದರೆ ಅವರಿಗೆ ಬೇರೆ ಕೋಚಿಂಗ್ ಅಗತ್ಯವಿಲ್ಲ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಸಮಾನತೆಯಿಂದ ಬದುಕು‌ವ‌ಅವಕಾಶ ಮಾಡಿಕೊಡಬೇಕು. ಶಾಲಾ ಕಾಲೇಜುಗಳಲ್ಲಿ ಜಾನಪದ ಸಂಸ್ಕೃತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮೂಲ ಹಳ್ಳಿಯ ಸಂಸ್ಕೃತಿ‌ ಉಳಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಜೋಗತಿ ಮಂಜಮ್ಮ ಹೇಳಿದರು.
ಅವರು ಲಯನ್ಸ್ ಸೇವಾ ಮಂದಿರ ಬಿ.ಸಿ.ರೋಡಿನಲ್ಲಿ ಕರ್ನಾಟಕ ಜಾನಪದ‌ ಪರಿಷತ್ ಬೆಂಗಳೂರು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದಿಂದ ಪತ್ತನಾಜೆ ಜಾನಪದ ಹಬ್ಬ ಆಚರಣೆಯ ಅಂಗವಾಗಿ ಏರ್ಪಡಿಸಲಾದ ಆಹಾರ ಮೇಳ, ವಸ್ತುಪ್ರದರ್ಶನ, ಕ್ರೀಡಾಕೂಟ, ಸಾಂಸ್ಕೃತಿಕ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.
ಬಾಲ್ಯದಲ್ಲಿ ತೃತೀಯ ಲಿಂಗಿಯಾಗಿ ಅನುಭವಿಸಿ ಮನೆಯಿಂದ, ಸಮಾಜದಿಂದ ಅವಮಾನಕ್ಕೆ ತಿರಸ್ಕಾರಕ್ಕೆ ಗುರಿಯಾದ ದಿನಗಳನ್ನು ತರೆದಿಟ್ಟರು. ಜಾನಪದ ಕಲೆಯ ಮೂಲಕ ಪದ್ಮಶ್ರೀ ಪ್ರಶಸ್ತಿ ಪಡೆದ ಮೇಲೆ ಎಲ್ಲರೂ ಗೌರವಿಸಿದ್ದಾರೆ ಎಂದರು. ತೃತೀಯ ಲಿಂಗಿಗಳಿಗೆ ಉತ್ತಮ ಶಿಕ್ಷಣ ನೀಡಿ ಸ್ವಾಭಿಮಾನದಿಂದ ಬದುಕಲು ಅವಕಾಶ ಮಾಡಿಕೊಡಬೇಕೆಂದರು.
ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ‌ ಪ್ರಧಾನ ಅರ್ಚಕ ರಾಮ ಭಟ್ ಶುಭಾಶಂಸನೆ ಮಾಡಿದರು. ಡಾ.ದಿವ ಕೊಕ್ಕಡ ಪತ್ತನಾಜೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಜಾನಪದ ಸಂಸ್ಕೃತಿ ಜೀವನಕ್ಕೆ‌ಅಡಿಪಾಯವಾಗಿದ್ದು ಜ್ಞಾನದ‌ ಆಗರವಾಗಿದೆ‌. ತುಳುನಾಡಿನಲ್ಲಿ ಪತ್ತನಾಜೆಗೆ ವಿಶೇಷ ಪ್ರಾಶಸ್ತ್ಯವಿದೆ ಎಂದು ತಿಳಿಸಿದರು.
ಮಾಜಿ ಸಚಿವ ಬಿ. ರಮಾನಾಥ ರೈ,ತುಳು ಸಾಹಿತ್ಯ ‌ಅಕಾಡೆಮಿ‌ ಅಧ್ಯಕ್ಷ ಎ.ಸಿ.ಭಂಡಾರಿ, ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ಡಾ.ತುಕಾರಾಮ ಪೂಜಾರಿ, ಉದ್ಯಮಿ‌ ಅರ್ಜುನ್ ಭಂಡಾರ್ಕರ್, ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಪುರಸಭೆ ಮಾಜಿ ಅಧ್ಯಕ್ಷೆ ಯಾಸ್ಮಿನ್ ಹಾಮದ್, ಮೋಹನ್ ಶೆಟ್ಟಿ ನರ್ವಲ್ದಡ್ಡ ಮೊದಲಾದವರು ವೇದಿಕೆಯಲ್ಲಿದ್ದು ಶುಭಹಾರೈಸಿದರು. ಡಾ.ಜೋಗತಿ ಮಂಜಮ್ಮರಿಗೆ ಪತ್ತನಾಜೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ದಿವ ಕೊಕ್ಕಡರನ್ನು ಸನ್ಮಾನಿಸಲಾಯಿತು.


ಬಂಟ್ವಾಳ ಜಾನಪದ ಪರಿಷತ್ ಅಧ್ಯಕ್ಷೆ ಪ್ರಮೀಳಾ ಮಾಣೂರು ಸ್ವಾಗತಿಸಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಸಂಚಾಲಕ ಗೋಪಾಲ ಅಂಚನ್ ಪ್ರಸ್ತಾವನೆ ಗೈದರು. ಪ್ರಶಾಂತ ಕನಪಾಡಿ ಪ್ರಾರ್ಥನೆ ಮಾಡಿದರು. ಎಚ್.ಕೆ. ನಯನಾಡು, ಅಕಬರ ಅಲಿ ನಿರೂಪಿಸಿದರು. ಅನಿಲ್‌ಪಂಡಿತ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು