ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಆಗಮನ: ಬೆಳ್ತಂಗಡಿಗೆ ಪಯಣ; ಮಾಜಿ ಶಾಸಕ ವಸಂತ ಬಂಗೇರ ಉತ್ತರಕ್ರಿಯೆಯಲ್ಲಿ ಭಾಗಿ
21/05/2024, 13:37

ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ನಂತರ ಮುಖ್ಯಮಂತ್ರಿಯವರು ಬೆಳ್ತಂಗಡಿಗೆ ತೆರಳಿದರು. ಮಾಜಿ ಶಾಸಕ, ಕಾಂಗ್ರೆಸ್ ನಾಯಕ ದಿವಂಗತ ಕೆ. ವಸಂತ ಬಂಗೇರ ಅವರ ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳುವರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಾ. ಮಂಜುನಾಥ ಭಂಡಾರಿ,
ಮಾಜಿ ಸಚಿವ ಬಿ. ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.