ಇತ್ತೀಚಿನ ಸುದ್ದಿ
ನಂಜನಗೂಡು: ರೈತರಿಗೆ ವೈಜ್ಞಾನಿಕ ಬರ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
21/05/2024, 18:04
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ಅಖಿಲ ಭಾರತ ರೈತ, ಕೃಷಿ ಕಾರ್ಮಿಕ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ರೈತರಿಗೆ ಬರ ಪರಿಹಾರವನ್ನು ರಾಜ್ಯ ಸರ್ಕಾರ ಕೊಡಬೇಕು. ಕೇಂದ್ರ ಸರ್ಕಾರ ರೈತರಿಗೆ ಸಮರ್ಪಕವಾಗಿ ಹಣ ನೀಡಿಲ್ಲ. ಬರ ಮುಗಿದು ಮಳೆಗಾಲ ಪ್ರಾರಂಭವಾಗಿದೆ. ರೈತರು ಬಿತ್ತನೆ ಮಾಡಲು ಹಣದ ಮುಗ್ಗಟ್ಟಿನಿಂದ ಪರದಾಡುತ್ತಿದ್ದಾರೆ. ಬರ ಪರಿಹಾರ ಘೋಷಣೆ ಮಾಡಿ ಒಂದು ವರ್ಷ ಕಳೆದಿದೆ ಆದರೆ, ರಾಜ್ಯ ಸರ್ಕಾರ ಇನ್ನು ಬರ ಪರಿಹಾರ ನೀಡಿಲ್ಲ ಎಂದು ಕಿಡಿಕಾರಿದ್ದಾರೆ.
ಕೆಲ ರೈತರಿಗೆ ಪುಡಿಗಾಸು ಪರಿಹಾರ ನೀಡಿ, ಕೈತೊಳೆದು ಕೊಂಡಿದ್ದಾರೆ. ಈ ಕೂಡಲೇ ವೈಜ್ಞಾನಿಕವಾಗಿ ಬರ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ರೈತರು ಮೈಕ್ರೋ ಫೈನಾನ್ಸ್ ಗಳಲ್ಲಿ ಸಾಲ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಲ ತೀರಿಸಲಾಗಿದೆ ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ರೈತಪರ ಎಂದು ಹೇಳಿಕೊಳ್ಳುವ ಸರ್ಕಾರಗಳು ಬರ ಪರಿಹಾರ ನೀಡಲು ಮೀನಾಮೇಷ ಎಣಿಸುತ್ತಿದ್ದಾರೆ. ಆದಷ್ಟು ರೈತರ ಬ್ಯಾಂಕ್ ಖಾತೆಗಳಿಗೆ ಬರ ಪರಿಹಾರ ಹಣವನ್ನು ನೀಡಬೇಕು. ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ಮೈಸೂರು ಜಿಲ್ಲಾ ಸಂಚಾಲಕರಾದ ಎಚ್.ಎಂ. ಬಸವರಾಜ್, ರೈತ ಮುಖಂಡರಾದ ಬೊಕ್ಕಳ್ಳಿ ನಂಜುಂಡಸ್ವಾಮಿ, ವಸಂತ ಸೇರಿದಂತೆ ರೈತರು ಮತ್ತು ಕೃಷಿ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.