6:42 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ…

ಇತ್ತೀಚಿನ ಸುದ್ದಿ

ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ; ಬಡವರಿಗೆ ಆರ್ಥಿಕ ಸಬಲತೆ ನೀಡುವುದೇ ಅಭಿವೃದ್ಧಿ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ

21/05/2024, 20:28

ಮಂಗಳೂರು(reporterkarnataka.com): ಬಡವರಿಗೆ ಆರ್ಥಿಕವಾಗಿ ಸಬಲತೆ ನೀಡುವುದೇ ಅಭಿವೃದ್ಧಿ ಆಗಿದೆ. ಅಭಿವೃದ್ಧಿ ಶೂನ್ಯ, ಅಭಿವೃದ್ಧಿ ಶೂನ್ಯ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶಕ್ಕೆ ಬರೀ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ಬಂದರೆ ಮಾತ್ರ ಸ್ವಾತಂತ್ರ್ಯ ಬಂದಂತೆ ಎಂದು ಡಾ. ಅಂಬೇಡ್ಕರ್ ಹೇಳಿದ್ದರು ಎಂದು ಮುಖ್ಯಮಂತ್ರಿ ನೆನಪಿಸಿಕೊಂಡರು.
ಬಿಜೆಪಿ ನಾಯಕರಿಗೆ ಸುಳ್ಳು ಹೇಳುವುದು ಚಾಳಿಯಾಗಿದೆ. ಅವರ ಹೇಳಿಕೆಯಲ್ಲಿ ಹುರುಳಿಲ್ಲ. ಅವರು ಬಜೆಟ್ ಓದುವುದಿಲ್ಲ ಎಂದು ಎಂದು ಸಿದ್ದರಾಮಯ್ಯ ನುಡಿದರು.

ಗ್ಯಾರೆಂಟಿ ಯೋಜನೆಗಳನ್ನು ಸೇರಿಸಿ 1.20 ಲಕ್ಷ ಕೋಟಿ ಬಜೆಟ್ ಕೊಟ್ಟಿದ್ದೇವೆ. ಈ ಹಿಂದೆ ನೀರಾವರಿಗೆ 16 ಸಾವಿರ ಕೋಟಿ ರೂ. ಇಡಲಾಗುತ್ತಿತ್ತು. ಈ ವರ್ಷ 18 ಸಾವಿರ ಕೋಟಿ ರೂ. ಇಟ್ಟಿದ್ದೇವೆ. ನಾವು ಏನು ಮಾಡಿಲ್ಲ ಎಂದು ಬಿಜೆಪಿಯವರು ಹೇಳುವುದೆಂದರೆ ಏನು? ಎಂದು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು