12:15 AM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 2024 ; ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್‌ಗೆ ಕಿರೀಟ | 10 ಮಂದಿ ರಾಜ್ಯ ಮಟ್ಟಕ್ಕೆ ಆಯ್ಕೆ

22/05/2024, 14:46

ಮಗಳೂರು : ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್ ನೇತೃತ್ವದಲ್ಲಿ ಪಾತ್‌ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಮತ್ತು ಲೇಡಿಸ್ ಸಲೂನ್ ಸಹಯೋಗದಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ 5 ನೇ ಆವೃತ್ತಿಯ ಫೈನಲ್ ಸ್ಪರ್ಧೆ ಮಂಗಳೂರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಜರಗಿತು.

ಈ ಬಗ್ಗೆ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, 25ಕ್ಕೂ ಅಧಿಕ ಸ್ಪರ್ಧಿಗಳು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಸ್ಪರ್ಧೆಯ ಅಂತಿಮ ಹಂತದಲ್ಲಿ ಭಾಗವಹಿಸಿದ್ದು, 10 ಮಂದಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದರು.

ವಿಜೇತರು :
ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024 ಕಿರೀಟವನ್ನು ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್ ಮುಡಿಗೇರಿಸಿಕೊಂಡರು. ಡಾ.ರಶ್ಮಾ ಪ್ರಥಮ ರನ್ನರ್ ಅಪ್, ಡಾ.ಶೃತಿ ಬಳ್ಳಾಲ್ ಹಾಗೂ ರಮ್ಯ ದ್ವಿತೀಯ ರನ್ನರ್ ಅಪ್, ವಿದ್ಯಾ ಸಂಪತ್ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು.

ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024ರ ಕ್ಲಾಸಿಕ್ ವಿಭಾಗದಲ್ಲಿ ಸಬೀತಾ ವಿಜೇತರಾಗಿದ್ದು, ಡಾ.ಅರ್ಚನಾ ಪ್ರಥಮ ರನ್ನರ್ ಅಪ್, ಸೌಮ್ಯ ರಾವ್ ದ್ವಿತೀಯ ರನ್ನರ್ ಅಪ್, ಸವಿತಾ ಭಂಡಾರಿ ತೃತೀಯ ರನ್ನರ್ ಅಪ್ ಪ್ರಶಸ್ತಿಗಳನ್ನು ಪಡೆದುಕೊಂಡರು. ಸೂಪರ್ ಕ್ಲಾಸಿಕ್ ವಿಭಾಗದಲ್ಲಿ ನಂದಿನಿ ಅವರು ವಿಜೇತರಾಗಿದ್ದಾರೆ.

ಅದ್ಧೂರಿಯಾಗಿ ನಡೆದ ಸೌಂದರ್ಯ ಸ್ಪರ್ಧೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರ ಮನಗೆದ್ದಿತು. ನೃತ್ಯ, ಗಾಯನ ಸೇರಿದಂತೆ ಇತರ ಕಾರ್ಯಕ್ರಮಗಳು ಕೂಡ ಈ ಸಂದರ್ಭದಲ್ಲಿ ಮೂಡಿಬಂದಿತ್ತು.

ಪಾತ್‌ವೇ ಎಂಟರ್‌ಪ್ರೈಸಸ್‌ನ ಮಾಲಕ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ದೀಪಕ್ ಗಂಗೂಲಿ, ಮರ್ಸಿ ಬ್ಯೂಟಿ ಅಕಾಡೆಮಿಯ ಮಾಲಕರು ಹಾಗು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರಾದ ಮರ್ಸಿ ವೀಣಾ ಡಿಸೋಜಾ, ಸಂಘಟಕರಾದ ಅನಿಶಾ ಗಂಗೂಲಿ, ಡಾ.ನಿಶಿತಾ ಶೆಟ್ಟಿಯಾನ್ ಫರ್ನಾಂಡೀಸ್, ಡಾ.ಶೃತಿ ಬಳ್ಳಾಲ್, ವಿದ್ಯಾ ಸಂಪತ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು