9:30 AM Sunday6 - October 2024
ಬ್ರೇಕಿಂಗ್ ನ್ಯೂಸ್
ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ದುರಂತ ಸ್ಮಾರಕ ದಲ್ಲಿ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ: ಮಡಿದವರಿಗೆ ನಮನ

22/05/2024, 20:34

ಮಂಗಳೂರು(reporterkarnataka.com): ದೇಶದ ಜನರನ್ನು ಬೆಚ್ಚಿ ಬೀಳಿಸಿದ ಮಂಗಳೂರು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತ ಸಂಭವಿಸಿ ಇದೀಗ 14 ವರ್ಷ ತುಂಬುತ್ತಿದೆ. ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್‌ ನಿರ್ಮಿಸಲಾಗಿದೆ. ಇಂದು ಬೆಳಗ್ಗೆ 9.30 ಗಂಟೆಗೆ ಜಿಲ್ಲಾಡಳಿತ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೇತೃತ್ವದಲ್ಲಿ ಪುಷ್ಪ ಗುಚ್ಛ ಇರಿಸಿ ಶ್ರದ್ಧಾಂಜಲಿ ಸಲ್ಲಿಸಿದರು.

2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾೖಯಿಂದ ಬಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಲ್ಯಾಂಡ್‌ ಆಗುವ ಹಂತದಲ್ಲಿ ಚಾಲಕನ ಲೆಕ್ಕಾಚಾರ ತಪ್ಪಿ ಮಿತಿಗಿಂತ ಸ್ವಲ್ಪ ಮೀಟರ್‌ ದೂರದಲ್ಲಿ ಇಳಿದ ಕಾರಣ ಹತೋಟಿ ತಪ್ಪಿ ಟರ್ಮಿನಲ್ ಬಳಿ ಕೆಂಜಾರಿನ ಕಡಿದಾದ ಗುಡ್ಡದಿಂದ ಕೆಳಗೆ ಉರುಳಿತ್ತು ಬೆಂಕಿ ಹತ್ತಿ ಕೊಂಡ ವಿಮಾನದಲ್ಲಿ ಪೈಲಟ್, ಸಿಬ್ಬಂದಿ ಸಹಿತ 158 ಮಂದಿ ಮೃತರಾಗಿದ್ದರು. ಈ ಪೈಕಿ 19 ಮಕ್ಕಳು ಹಾಗೂ 6 ಮಂದಿ ಶಿಶುಗಳು, 6 ವಿಮಾನ ಸಿಬ್ಬಂದಿ ಸೇರಿ 166 ಮಂದಿ ಪ್ರಯಾಣಿಸುತ್ತಿದ್ದರು.ಅಪಘಾತದಲ್ಲಿ ಬದುಕುಳಿದವರು 8 ಮಂದಿ ಮಾತ್ರ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ , ಮಂಗ ಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್,ಸಂತ್ರಸ್ತರ ಕುಟುಂಬದ ಸದಸ್ಯರಾದ ಶೊಭಾ ಶೆಟ್ಟಿ, ಶ್ರೇಯ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು