1:04 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಶಾಸಕ ಹರೀಶ್ ಪೂಂಜ ಬಂಧಿಸಲು ಹೋದ ಬೆಳ್ತಂಗಡಿ ಪೊಲೀಸರು ಬರಿಗೈಯಲ್ಲಿ ವಾಪಸ್: ನೋಟಿಸ್ ನೀಡಿ ಹಿಂತಿರುಗಿದ ಖಾಕಿ ಪಡೆ

22/05/2024, 22:48

ಬೆಳ್ತಂಗಡಿ(reporterkarnataka.com): ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರ ಬಂಧನನೋತ್ತರ ನಡೆದ ಘಟನೆಗಳಿಗೆ ಪೂರಕವಾಗಿ ದಾಖಲಾದ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಲು ಹೋದ ಪೊಲೀಸರು ಶಾಸಕರಿಗೆ ನೋಟಿಸ್ ಕೊಟ್ಟು ಬರಿಗೈಯಲ್ಲಿ ವಾಪಸ್ ಬಂದ ಘಟನೆ ನಡೆದಿದೆ. ಈ ನಡುವೆ ನೋಟಿಸಿಗೆ ಉತ್ತರಿಸಲು ಶಾಸಕರು ಠಾಣೆಗೆ ಆಗಮಿಸಿದ್ದಾರೆ.
ಮೇಲಂತಬೆಟ್ಟು ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ, ಬಿಜೆಪಿ ಯುವ ಮೋರ್ಚಾದ ಶಶಿರಾಜ್ ಅವರ ಬಂಧನವನ್ನು ಪ್ರಶ್ನಿಸಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಠಾಣೆಗೆ ಹೋಗಿ ಪೊಲೀಸ್ ಠಾಣೆ ನಿಮ್ಮ ಅಪ್ಪಂದಾ? ಎಂದು ಸಬ್ ಇನ್ಸ್‌ಪೆಕ್ಟರ್ ಮುರಳೀಧರ ನಾಯಕ್ ಅವರಲ್ಲಿ ಪ್ರಶ್ನಿಸಿದ್ದರು. ನಂತರ ಠಾಣೆಯಲ್ಲಿ ರಾತ್ರಿ ಧರಣಿ ನಡೆಸಿದ್ದರು. ಮರುದಿನ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿಯನ್ನು ಡಿಜೆ ಹಳ್ಳಿ, ಕೆಜೆ ಹಳ್ಳಿ ಮಾಡುತ್ತೇನೆ ಎಂದು ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಾಗಿಸಲಾಗಿತ್ತು. ಶಾಸಕರ ಬಂಧನಕ್ಕೆ ಪೊಲೀಸರು ಅವರ ನಿವಾಸಕ್ಕೆ ತೆರಳಿದ್ದರು. ಅಲ್ಲಿ ಬಿಜೆಪಿ ಸಂಸದರು, ಶಾಸಕರುಗಳು, ಹರೀಶ್ ಪೂಂಜ ಪರ ವಕೀಲರು ಹಾಗೂ ಅಪಾರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ನೆರೆದಿದ್ದರು. ಪೊಲೀಸ್ ಹಾಗೂ ಬಿಜೆಪಿ ನಾಯಕರ ನಡುವೆ ವಾದ- ಪ್ರತಿವಾದ ನಡೆಯಿತು. ನೋಟಿಸ್ ಕೊಟ್ಟು ಬಂಧಿಸಿ ಎಂದು ಬಿಜೆಪಿ ನಾಯಕರು ಹಾಗೂ ಪೂಂಜ ಪರ ವಕೀಲರು ವಾದಿಸಿದರು. ಕೊನೆಗೂ ಪೂಂಜ ಬಂಧನ ಸಾಧ್ಯವಾಗದೆ ಪೊಲೀಸರು ನೋಟಿಸ್ ನೀಡಿ ಬರಿಗೈಯಲ್ಲಿ ವಾಪಸಾದರು. ನಂತರ ಶಾಸಕರು ನೋಟಿಸಿಗೆ ಉತ್ತರಿಸಲು ಠಾಣೆಗೆ ಆಗಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು