1:55 PM Sunday6 - October 2024
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಸಹೋದರ ದಿಢೀರ್ ನಾಪತ್ತೆ; ಕೂಳೂರು ಸೇತುವೆಯಲ್ಲಿ ಕಾರು ಪತ್ತೆ; ಆತ್ಮಹತ್ಯೆ… ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ

ಇತ್ತೀಚಿನ ಸುದ್ದಿ

ಉಳ್ಳಾಲ: ಮೇ 26ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

23/05/2024, 15:28

ಮಂಗಳೂರು(reporterkarnataka.com)ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಳ್ಳಾಲ ಶಾಖೆಯ 9ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ದಂತ ಚಿಕಿತ್ಸಾ, ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ
ಉಳ್ಳಾಲ ನಗರಸಭೆ ಆವರಣದಲ್ಲಿರುವ ಸಮುದಾಯ ಭವನದಲ್ಲಿ
ಮೇ 26ರಂದು ಬೆಳಗ್ಗೆ 9.30ರಿಂದ ಮದ್ಯಾಹ್ನ 12.30ರ ವರೆಗೆ ಆಯೋಜಿಸಲಾಗಿದೆ.
ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಮತ್ತು ಮಹಿಳಾ ಘಟಕ, ಬಂಡಿಕೊಟ್ಯ, ಉಳ್ಳಾಲ ಹಾಗೂ ವಿದ್ಯಾರಣ್ಯ ಯುವಕ ವೃಂದ (ರಿ.) ಮತ್ತು ವಿದ್ಯಾರಣ್ಯ ಕಲಾವೃಂದ ಉಳ್ಳಾಲ ಇದರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.
ವೈದ್ಯಕೀಯ ಶಿಬಿರದಲ್ಲಿ ಸಮುದಾಯ ದಂತ ಆರೋಗ್ಯ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ನುರಿತ ವೈದ್ಯರ ತಂಡದಿಂದ ಉಚಿತ ದಂತ ತಪಾಸಣೆ ಮತ್ತು ಸಲಹೆ , ಹಲ್ಲುಗಳ ಶುಚೀಕರಣ, ಹಲ್ಲುಗಳ ಚಿಕ್ಕ ಚಿಕ್ಕ ಭರ್ತಿಗೊಳಿಸುವ ಚಿಕಿತ್ಸೆ, ಚಿಕಿತ್ಸೆಗೆ ಒಳಪಡದ ಮತ್ತು ಬಹಳ ಕೆಟ್ಟಿರುವ ಹಲ್ಲುಗಳನ್ನು ಕೀಳಿಸುವುದು ಹಾಗೂ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇವರ ನುರಿತ ವೈದ್ಯರ ತಂಡದಿಂದ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತçಚಿಕಿತ್ಸೆಯನ್ನು ಮಾಡಲಾಗುವುದು, ಬಿ.ಪಿ. ಮತ್ತು ಮದುಮೇಹ ತಪಾಸಣೆ, ಎಲುಬು, ಕೀಲು, ಕಿವಿ, ಮೂಗು, ಗಂಟಲು ತಪಾಸಣೆ, ಜನರಲ್ ವೈದ್ಯಕೀಯ ಸಮಾಲೋಚನೆ, ಉಚಿತ ಔಷಧಿ ವಿತರಣೆ ಹಾಗೂ ಅಗತ್ಯವುಳ್ಳ ಕಣ್ಣಿನ ರೋಗಿಗಳಿಗೆ ಸಂಘದ ವತಿಯಿಂದ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು