3:03 AM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ವದಂತಿಗಳಿಗೆ ಕಿವಿಗೊಡಬೇಡಿ, ಪ್ರತಿಯೊಬ್ಬರಿಗೂ ಲಸಿಕೆ ನೀಡುತ್ತೇವೆ: ಶಾಸಕ ವೇದವ್ಯಾಸ ಕಾಮತ್

19/05/2021, 19:07

ಮಂಗಳೂರು(reporterkarnataka news):

ಪ್ರತಿಯೊಬ್ಬರಿಗೂ ಕೂಡ ಲಸಿಕೆ ನೀಡುವ ಜವಾಬ್ದಾರಿ ಸರಕಾರದ, ಜಿಲ್ಲಾಡಳಿತದ ಮೇಲಿದೆ.‌ ವದಂತಿಗಳಿಗೆ ಕಿವಿಗೊಡಬೇಡಿ ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ನೀಡುತ್ತೇವೆ ಎಂದು ಶಾಸಕ ‌ವೇದವ್ಯಾಸ್ ಕಾಮತ್ ಹೇಳಿದ್ದಾರೆ. 

ಪ್ರಥಮ ಹಂತದ ಕೋವಿಶೀಲ್ಡ್ ಲಸಿಕೆ ಪಡೆದವರಿಗೆ 84 ದಿನಗಳ ನಂತರ ಎರಡನೇ ಹಂತದ ಲಸಿಕೆ ನೀಡಲಾಗುತ್ತದೆ. ಲಸಿಕೆ ನೀಡುವ ಒಂದು ದಿನ ಮೊದಲು ಎಸ್.ಎಂ.ಎಸ್ ಅಥವಾ ಕರೆ ಮಾಡಿ ಮಾಹಿತಿ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಗಾಬರಿಪಡಬೇಕಿಲ್ಲ ಎಂದು ಶಾಸಕರು ಹೇಳಿದ್ದಾರೆ. 

ಪ್ರಾರಂಭದ ದಿನಗಳಲ್ಲಿ ಲಸಿಕೆಯ ಕುರಿತು ಬಿಜೆಪಿಯ ವ್ಯಾಕ್ಸಿನ್ ಎಂದು ಉದ್ದೇಶಪೂರ್ವಕವಾಗಿ ಅಪಪ್ರಚಾರ ಮಾಡಿದ ಕಾಂಗ್ರೆಸ್ ಮುಖಂಡರು ಇಂದು ಲಸಿಕೆ ಸಿಗುತ್ತಿಲ್ಲ ಎಂದು ಅಪಪ್ರಚಾರ ಮಾಡುತಿದ್ದಾರೆ. ಬೇರೆ ಬೇರೆ ರೀತಿಯಲ್ಲಿ ಜನರಲ್ಲಿ ಭೀತಿ ಹುಟ್ಟಿಸಿ ಜನರು ಲಸಿಕೆ ಪಡೆಯಲು ಬಾರದಂತೆ ಮಾಡಿದ ಕಾಂಗ್ರೇಸ್ ಮುಖಂಡರು ಇಂದು ಲಸಿಕೆ ಪಡೆಯುತ್ತಿದ್ದಾರೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು