7:45 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಮಂಗಳೂರು- ದುಬೈ ನಡುವೆ ನೇರ ವಿಮಾನ ಸಂಚಾರ ಆ. 20ರಂದು ಆರಂಭ: ಏರ್ ಪೋರ್ಟ್ ನಲ್ಲಿ ರಾಪಿಡ್ ಆರ್‌ಟಿಪಿಸಿಆರ್ ಉಪಕರಣ ಅಳವಡಿಕೆ

18/08/2021, 22:10

ಮಂಗಳೂರು(reporterkarnataka.com):  ಮಂಗಳೂರು- ದುಬೈ ನಡುವೆ ನೇರ ವಿಮಾನ ಸಂಚಾರ ಆಗಸ್ಟ್ 20ರಂದು ಆರಂಭಗೊಳ್ಳಲಿದ್ದು, ಟಿಕೆಟ್‌ ಬುಕ್ಕಿಂಗ್‌ ಆರಂಭಗೊಂಡಿದೆ.

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಟ್ವಿಟ್ಟರ್‌ ಖಾತೆಯಲ್ಲಿ ಈ ವಿಷಯ ತಿಳಿಸಿದೆ.
ಈ ನಡುವೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಪಿಡ್ ಆರ್‌ ಟಿಪಿಸಿಆರ್ ಉಪಕರಣ ಅಳವಡಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ದುಬೈಗೆ ಬುಧವಾರದಿಂದ ವಿಮಾನ ಯಾನ ಸಂಚಾರ ಮತ್ತೆ ಆರಂಭಗೊಂಡಿದೆ. ಏರ್‌ ಇಂಡಿಯಾ ಎಕ್ಸ್‌ ಪ್ರಸ್‌ ವಿಮಾನವು ಮಂಗಳೂರಿನಿಂದ ಕೇರಳದ ತಿರುವನಂತಪುರ ಮೂಲಕ ದುಬೈ ತಲುಪಲಿದೆ. 

ಭಾರತದ ವಿಮಾನಗಳಿಗೆ ಯುಎಇ ವಿಧಿಸಿದ್ದ ನಿರ್ಬಂಧವನ್ನು ಆಗಸ್ಟ್ 5 ರಂದು ವಾಪಸ್‌ ಪಡೆದಿತ್ತು. ಆದರೆ ಭಾರತದಿಂದ ಹೊರಡುವ 48 ಗಂಟೆ ಮೊದಲು ನಡೆಸಿದ ಆರ್‌.ಟಿ.ಪಿ.ಸಿ.ಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ಮತ್ತು 4 ಗಂಟೆ ಮೊದಲು ನಡೆಸಿದ ರ್ಯಾಪಿಡ್‌ ಆರ್‌ಟಿಪಿಸಿಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ಹೊಂದಿದವರು ಮಾತ್ರ ಯುಎಇಗೆ ಬರಬಹುದು ಎಂದು ಷರತ್ತು ವಿಧಿಸಿತ್ತು. ಹೀಗಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾಪಿಡ್ ಆರ್‌ಟಿಪಿಸಿಆರ್ ಉಪಕರಣ ಅಳವಡಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು. ಅತ್ಯಾಧುನಿಕ ರ್ಯಾಪಿಡ್‌ ಆರ್‌ಟಿಪಿಸಿಆರ್‌ ಪರೀಕ್ಷೆ ಬುಧವಾರದಿಂದ ಅಧಿಕೃತವಾಗಿ ಪ್ರಾರಂಭವಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು