7:52 PM Sunday6 - October 2024
ಬ್ರೇಕಿಂಗ್ ನ್ಯೂಸ್
ರಡ್ಡೇರಹಟ್ಟಿಯಲ್ಲಿ ಅಂತರ್ ರಾಜ್ಯ ಮಟ್ಟದ ಪುರುಷರ ಮುಕ್ತ ವಾಲಿಬಾಲ್ ಪಂದ್ಯಾವಳಿ ರಾಜ್ಯಮಟ್ಟದ ಮಂಗಳೂರು ದಸರಾ ಹಾಫ್ ಮ್ಯಾರಥಾನ್: 2 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ ಮಾಜಿ ಶಾಸಕರ ಸಹೋದರ ದಿಢೀರ್ ನಾಪತ್ತೆ; ಕೂಳೂರು ಸೇತುವೆಯಲ್ಲಿ ಕಾರು ಪತ್ತೆ; ಆತ್ಮಹತ್ಯೆ… ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ…

ಇತ್ತೀಚಿನ ಸುದ್ದಿ

ಗವರ್ನರ್, ಸಿಎಂ ಸಹಿತ ವಿವಿಐಪಿಗಳ ಆಗಮನ: ಮೇ 25, 26ರಂದು ಕಡಲನಗರಿಯಲ್ಲಿ ಸಂಚಾರ ಬದಲಾವಣೆ

24/05/2024, 21:56

ಮಂಗಳೂರು(reporterkarnataka.com): ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಇತರ ಗಣ್ಯರು ಮೇ 25 ಮತ್ತು 26ರಂದು ನಗರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.
ನಗರದ ಎಂ.ಜಿ ರಸ್ತೆಯಲ್ಲಿನ ಟಿ.ಎಂ.ಎ.ಪೈ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಇತರ ಗಣ್ಯರು ಭಾಗವಹಿಸುವ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ವಾಹನ ದಟ್ಟಣೆ ಅಧಿಕವಾಗುವ ಸಾಧ್ಯತೆ ಇರುತ್ತದೆ. ಈ ಕಾರಣದಿಂದಾಗಿ ನವಭಾರತ ಸರ್ಕಲ್‌ನಿಂದ ಪಿವಿಎಸ್ ಮುಖಾಂತರ ಲೇಡಿಹಿಲ್ ಸರ್ಕಲ್ ಕಡೆಗೆ ಹೋಗುವ ಎಂ.ಜಿ. ರಸ್ತೆಯಲ್ಲಿನ ಎಲ್ಲಾ ಮೀಡಿಯನ್‌ಗಳನ್ನು ಮುಚ್ಚಬೇಕಾಗುತ್ತದೆ. (ಬೆಸೆಂಟ್ ಜಂಕ್ಷನ್, ಕೋಡಿಯಾಲ್‌ಗುತ್ತು ಕ್ರಾಸ್, ಬಲ್ಲಾಳ್‌ಬಾಗ್ ಜಂಕ್ಷನ್, ನೆಹರೂ ಅವೆನ್ಯೂ ಜಂಕ್ಷನ್). ಹಾಗಾಗಿ ಈ ರಸ್ತೆಯನ್ನು ಉಪಯೋಗಿಸುವ ಎಲ್ಲಾ ವಾಹನ ಚಾಲಕರಿಗೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಸೂಚಿಸಲಾಗಿದೆ.
*ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿರುವ ಸ್ಥಳಗಳು:*
ಕೊಟ್ಟಾರ ಚೌಕಿ, ಕುಂಟಿಕಾನ, ಕೆ.ಪಿ.ಟಿ, ನಂತೂರು, ಕೆ.ಎಸ್.ಆರ್.ಟಿ.ಸಿ., ಬಂಟ್ಸ್ ಹಾಸ್ಟೆಲ್, ಡಾ. ಅಂಬೇಡ್ಕರ್ ಸರ್ಕಲ್, ಹಾರ್ಟಿಕಲ್ಚರ್ ಜಂಕ್ಷನ್, ಬಲ್ಮಠ, ಹಂಪನಕಟ್ಟೆ, ಕರಾವಳಿ ಸರ್ಕಲ್, ಕಂಕನಾಡಿ, ಪಂಪ್‌ವೆಲ್, ತೊಕ್ಕೊಟ್ಟು.
*ಮಂಗಳೂರು ನಗರದಲ್ಲಿ ಮಾಡಲಾಗಿರುವ ಸಂಚಾರ ಪರ್ಯಾಯ ವ್ಯವಸ್ಥೆ ಈ ಕೆಳಕಂಡಂತಿರುತ್ತದೆ.*
*ಹಂಪನಕಟ್ಟೆಯಿಂದ ಬಂಟ್ಸ್ ಹಾಸ್ಟೆಲ್ ಮುಖಾಂತರ ಲೇಡಿಹಿಲ್‌ಗೆ ಹೋಗುವ ಎಲ್ಲಾ ವಾಹನಗಳು ಕರಂಗಲಪಾಡಿ ಅಥವಾ ಭಾರತ್‌ಬೀಡಿ ಜಂಕ್ಷನ್ ಮುಖಾಂತರ ಚಲಿಸುವುದು.
* ಪಿ.ವಿ.ಎಸ್ ಜಂಕ್ಷನ್‌ನಿಂದ ಲೇಡಿಹಿಲ್ ಸರ್ಕಲ್‌ವರೆಗಿನ ಎಂ.ಜಿ. ರಸ್ತೆಗೆ ಬಂದು ಸೇರುವ ಎಲ್ಲಾ ಕೂಡು ರಸ್ತೆಗಳನ್ನು ಉಪಯೋಗಿಸುವ ವಾಹನ ಸವಾರರು ಬಿಜೈ ಚರ್ಚ್ ರೋಡ್ / ಕುದ್ರೋಳಿ ರಸ್ತೆಯನ್ನು ಉಪಯೋಗಿಸುವುದು.

*ಬಸ್ಸುಗಳ ಸಂಚಾರಕ್ಕೆ ನಿಗದಿಪಡಿಸಿದ ರಸ್ತೆಗಳು:*
* ಕೆ.ಎಸ್.ರಾವ್ ರಸ್ತೆ, ಎಂ.ಜಿ. ರಸ್ತೆ, ಬಂಟ್ಸ್ ಹಾಸ್ಟೆಲ್ ಮುಖಾಂತರ ಸಂಚರಿಸುವ ಎಲ್ಲಾ ಸಿಟಿ ಬಸ್ಸುಗಳು, ಎಕ್ಸ್‌ಪ್ರೆಸ್ ಬಸ್ಸುಗಳು ಹಾಗೂ KSRTC ಬಸ್ಸುಗಳು ಹಂಪನಕಟ್ಟ, ಡಾ.ಅಂಬೇಡ್ಕರ್ ವೃತ್ತ, ಬಲ್ಮಠ, ಹಾರ್ಟಿಕಲ್ಚರ್ ಜಂಕ್ಷನ್, ಕದ್ರಿ ಜಂಕ್ಷನ್, ನಂತೂರು ಮುಖಾಂತರ ಸಂಚರಿಸಲು ಸೂಚಿಸಿದೆ.
* ಕೊಟ್ಟಾರಚೌಕಿ ಮುಖಾಂತರ ಸ್ಟೇಟ್‌ಬ್ಯಾಂಕ್ ಕಡೆಗೆ ಬರುವ ಎಲ್ಲಾ ಸಿಟಿ ಬಸ್ಸುಗಳು, ಎಕ್ಸ್‌ಪ್ರೆಸ್ ಬಸ್ಸುಗಳು ಹಾಗೂ KSRTC ಬಸ್ಸುಗಳು ನಂತೂರು ಮುಖಾಂತರ ಸಂಚರಿಸಲು ಸೂಚಿಸಿದೆ.
* KSRTC ಬಸ್ಸ್ ನಿಲ್ದಾಣದಿಂದ ಹೊರಹೋಗುವ ಹಾಗೂ ಒಳಬರುವ ಎಲ್ಲಾ ಬಸ್ಸುಗಳು ರಾಷ್ಟ್ರೀಯ ಹೆದ್ದಾರಿಯ ಕುಂಟಿಕಾನ ಜಂಕ್ಷನ್ ಮೂಲಕ ಒಳ ಬರಲು ಹಾಗೂ ಹೊರ ಹೋಗಲು ಸೂಚಿಸಿದೆ.
*ವಾಹನ ಪಾರ್ಕಿಂಗ್ ನಿಷೇಧಿತ ಸ್ಥಳಗಳು:*
ಪಿ.ವಿ.ಎಸ್ ಜಂಕ್ಷನ್‌ನಿಂದ ಲಾಲ್‌ಭಾಗ್ ಜಂಕ್ಷನ್‌ವರೆಗಿನ ಎಂ.ಜಿ ರಸ್ತೆಯಲ್ಲಿ, PVS ಜಂಕ್ಷನ್ ನಿಂದ ಬಂಟ್ಸ್ ಹಾಸ್ಟೆಲ್ ಜಂಕ್ಷನ್‌ವರೆಗೆ ಹಾಗೂ ಲಾಲ್‌ಬಾಗ್ ಜಂಕ್ಷನ್‌ನಿಂದ ಕೆ.ಪಿ.ಟಿ ಜಂಕ್ಷನ್‌ವರೆಗಿನ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು