2:24 PM Wednesday17 - December 2025
ಬ್ರೇಕಿಂಗ್ ನ್ಯೂಸ್
Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ…

ಇತ್ತೀಚಿನ ಸುದ್ದಿ

ಉಡುಪಿ: ನಡು ರಸ್ತೆಯಲ್ಲೇ ಗ್ಯಾಂಗ್ ವಾರ್ ವೀಡಿಯೊ ವೈರಲ್; ಕೊನೆಗೂ ಎಚ್ಚೆತ್ತ ಪೊಲೀಸರಿಂದ ಇಬ್ಬರ ಬಂಧನ

25/05/2024, 12:09

ಉಡುಪಿ(reporterkarnataka.com): ಉಡುಪಿಯ ನಡು ರಸ್ತೆಯಲ್ಲಿ ಎರಡು ತಂಡಗಳ ನಡುವೆ ನಡೆದ ಗ್ಯಾಂಗ್ ವಾರ್ ಸಂಬಂಧಿಸಿದ ವೀಡಿಯೊ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.


ಉಡುಪಿ- ಮಣಿಪಾಲ ರೋಡಿನ ನಡು ರಸ್ತೆಯಲ್ಲಿಯೇ ಎರಡು ತಂಡಗಳ ನಡುವೆ ಕಾದಾಟ ನಡೆದಿತ್ತು. ಎರಡು ಕಾರುಗಳಲ್ಲಿ ಬಂದ ತಂಡ ಹೊಡೆದಾಟಕ್ಕೆ ನಿರತವಾಗಿತ್ತು. ಒಬ್ಬನಿಗೆ ಕಾರು ಡಿಕ್ಕಿ ಹೊಡೆದು ರಸ್ತೆಗೆ ಉರುಳಿ ಬಿದ್ದಿರುವುದು. ಬೆನ್ನಟ್ಟಿ ಓಡಿಸುವುದು ವೀಡಿಯೊದಲ್ಲಿ ಕಂಡು ಬರುತ್ತದೆ. ಮೇ 18ರಂದು ಈ ಘಟನೆ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಮೇ 20ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಉಡುಪಿ ನಗರ ಪೊಲೀಸರು ಆಶಿಕ್ ಮತ್ತು ರಕೀಬ್ ಎಂಬವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಕೃತ್ಯಕ್ಕೆ ಬಳಸಿದ ಎರಡು ಸ್ವಿಫ್ಟ್ ಕಾರುಗಳು ಮತ್ತು ಎರಡು ಬೈಕ್‌ಗಳು, ಒಂದು ತಲ್ವಾರ್ ಮತ್ತು ಒಂದು ಡ್ರ್ಯಾಗರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು