3:29 PM Wednesday13 - August 2025
ಬ್ರೇಕಿಂಗ್ ನ್ಯೂಸ್
ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್…

ಇತ್ತೀಚಿನ ಸುದ್ದಿ

ಪೂರ್ವ ಮುಂಗಾರಿಗೇ ಅನಾಹುತ: ಅಬ್ಬಕ್ಕನಗರಲ್ಲಿ ತುಂಬಿ ಹರಿಯುತ್ತಿದ್ದ ತೋಡಿಗೆ ಆಟೋ ಉರುಳಿ ಚಾಲಕ ಸಾವು

25/05/2024, 12:09

ಮಂಗಳೂರು(reporterkarnataka.com):
ಮುಂಗಾರು ಪೂರ್ವ ಮಳೆಗೆ ಕಡಲನಗರಿಯಲ್ಲಿ ಜೀವಹಾನಿ ಸಂಭವಿಸಿದೆ. ನಗರದ ಕೊಟ್ಟಾರಚೌಕಿ ಬಳಿ
ಮೊದಲ ಮಳೆಗೇ ನಗರದಲ್ಲಿ ಜೀವಹಾನಿ ಸಂಭವಿಸಿದ್ದು, ಆಟೋ ರಿಕ್ಷಾ ತೋಡಿಗೆ ಉರುಳಿ ಚಾಲಕ ಮೃತಪಟ್ಟ ಘಟನೆ ಕೊಟ್ಟಾರ ಅಬ್ಬಕ್ಕ ನಗರದಲ್ಲಿ ತುಂಬಿ ಹರಿಯುತ್ತಿದ್ದ ತೋಡಿಗೆ ಆಟೋರಿಕ್ಷಾವೊಂದು ಉರುಳಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟಿದ್ದಾರೆ.
ಸಾವನ್ನಪ್ಪಿದವರನ್ನು ಸ್ಥಳೀಯ ನಿವಾಸಿ ಆಟೋಚಾಲಕ ದೀಪಕ್ (40) ಎಂದು ಗುರುತಿಸಲಾಗಿದೆ.
ಶುಕ್ರವಾರ ರಾತ್ರಿಸುರಿದ ಅಬ್ಬರದ ಮಳೆಗೆ ಕೊಟ್ಟಾರ ಅಬ್ಬಕ್ಕ ನಗರದಲ್ಲಿನ ತೋಡು ತುಂಬಿ ರಸ್ತೆಯ ಮೇಲೆ ಹರಿಯುತ್ತಿತ್ತು. ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ರಿಕ್ಷಾ ಉರುಳಿ ತೋಡಿಗೆ ಬಿದ್ದಿದೆ‌. ತೋಡು ಭರ್ತಿ ನೀರಿದ್ದ ಪರಿಣಾಮ ರಿಕ್ಷಾ ಚಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
*ಪಾಲಿಕೆ ನಿರ್ಲಕ್ಷ್ಯ*: ತೋಡಿಗೆ ಸರಿಯಾಗಿ ತಡೆಗೋಡೆ ನಿರ್ಮಿಸದ ಕಾರಣ ದುರಂತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು