10:03 PM Sunday4 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಎಂಎಲ್ ಸಿ ಸ್ಥಾನ: ನಂಜನಗೂಡಿಯಲ್ಲಿ ಅಹಿಂದ ಮುಖಂಡರ ಒತ್ತಾಯ

27/05/2024, 21:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ನೀಡುವಂತೆ ವಿವಿಧ ಸಮಾಜಗಳು ಸೇರಿದಂತೆ ಅಹಿಂದ ಮುಖಂಡರುಗಳು ಕಾಂಗ್ರೆಸ್ ವರಿಷ್ಠರಲ್ಲಿ ಒತ್ತಾಯ ಮಾಡಿದ್ದಾರೆ.
ಅಹಿಂದ ಮುಖಂಡರುಗಳಾದ ಕೆಂಪಣ್ಣ, ರಾಜು, ಒಬೇದುಲ್ಲಾ ಸೇರಿದಂತೆ ವಿವಿಧ ಸಮಾಜದ ಮುಖಂಡರುಗಳು ಇಂದು ನಂಜನಗೂಡು ತಾಲೂಕು ಪತ್ರಕರ್ತರ ಭವನದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಐದು ವರ್ಷ ಶಾಸಕರಾಗಿ ಕ್ಷೇತ್ರಕ್ಕೆ ಹೆಚ್ಚು ಅನುದಾನ ತಂದು ಅಭಿವೃದ್ಧಿ ಪಡಿಸುವ ಮೂಲಕ ಜನಾನುರಾಗಿಯಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ವರಿಷ್ಠರ ಮಾತಿನಂತೆ ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿ ಅವರ ಗೆಲುವಿಗೆ ಸಹಕಾರಿಯಾಗಿದ್ದಾರೆ.
ಸಿದ್ದರಾಮಯ್ಯನವರು ಸಿಎಂ ಆಗಿರುವ ಕಾರಣ ಕ್ಷೇತ್ರದ ಜವಾಬ್ದಾರಿ ನೋಡಿಕೊಳ್ಳುತ್ತಿರುವ ಇವರಿಗೆ ಸಾಂವಿಧಾನಿಕ ಹುದ್ದೆ ಎಂಎಲ್ ಸಿ ಸ್ಥಾನ ನೀಡಿದರೆ ಕ್ಷೇತ್ರದ ಜೊತೆಗೆ ಮೈಸೂರು ಚಾಮರಾಜನಗರ ಮಂಡ್ಯ ಹಾಸನ ಕೊಡಗು ಜಿಲ್ಲೆಗಳ ಅಭಿವೃದ್ಧಿಗೂ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಈ ಭಾಗದ ಅಭಿವೃದ್ಧಿಗಾಗಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರುಗಳಾದ ಎಚ್ ಸಿ ಮಹದೇವಪ್ಪ,ಕೆ. ವೆಂಕಟೇಶ್ ಸೇರಿದಂತೆ ಪಕ್ಷದ ವರಿಷ್ಠರು ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವಂತೆ ಒತ್ತಾಯಿಸಿ ಮನವಿ ಮಾಡಿಕೊಂಡರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಕುರಿಹುಂಡಿ ರಾಜು, ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆಂಪಣ್ಣ, ರಾಜ್ಯ ಅಹಿಂದ ಸಂಚಾಲಕ ಕೃಷ್ಣ, ತಾಲೂಕು ಘಟಕದ ಅಧ್ಯಕ್ಷ ಮಹದೇವು, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಒಬೇದುಲ್ಲ, ವೀರಶೈವ ಮುಖಂಡ ಗುರುಪಾದಪ್ಪ, ಓಬಿಸಿ ಉಪಾಧ್ಯಕ್ಷ ರಾಜಣ್ಣ, ರಾಜ್ಯ ಅಹಿಂದ ಸಂಚಾಲಕ ಹುಚ್ಚಯ್ಯ, ಮುಖಂಡರಾದ ನೀಲಿ ಸಿದ್ದು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು