3:23 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮತದಾನ ಕುರಿತು ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಪ್ರಜಾವಾಣಿ ಪತ್ರಿಕೆಯ ಮಂಗಳೂರು ಛಾಯಾಗ್ರಾಹಕ ಎಚ್. ಫಕ್ರುದ್ಧೀನ್ ಪ್ರಥಮ

28/05/2024, 00:07

ಬೆಂಗಳೂರು(reporterkarnataka.com): ಸಾರ್ವತ್ರಿಕ ಲೋಕಸಭಾ ಚುನಾವಣೆ – 2024 ರ ಅಂಗವಾಗಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಮಾಧ್ಯಮ ಹಾಗೂ ಹವ್ಯಾಸಿ ಛಾಯಾಗ್ರಾಹಕರಿಗಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರಜಾವಾಣಿಯ ಮಂಗಳೂರು ಛಾಯಾಗ್ರಾಹಕ ಎಚ್. ಫಕ್ರುದ್ಧೀನ್ ಪ್ರಥಮ ಸ್ಥಾನ ಪಡೆದಿದ್ದಾರೆ.
ಉಳಿದಂತೆ ಬಾಗಲಕೋಟೆಯ ಹಳ್ಳಿ ಸಂದೇಶ ಪತ್ರಿಕೆಯ ಇಂದ್ರಕುಮಾರ್ ಬಿ ದಸ್ತೇನವರ ದ್ವೀತಿಯ, ಮೂಡಬಿದಿರೆಯ ಹವ್ಯಾಸಿ ಛಾಯಾಗ್ರಾಹಕ ಜಿನೇಶ್ ಪ್ರಸಾದ್ ತೃತೀಯ ಸ್ಥಾನ ಗಳಿಸಿದ್ದಾರೆ. ಸಮಾದಾನಕರ ಬಹುಮಾನಕ್ಕೆ ಇಬ್ಬರು ಆಯ್ಕೆಯಾಗಿದ್ದು ಉಡುಪಿಯ ಉದಯವಾಣಿ ಪತ್ರಿಕೆಯ ಅಸ್ಟ್ರೋ ಮೋಹನ್ ಹಾಗೂ ಬೆಂಗಳೂರಿನ ಸಂಜೆ ಸಮಯ ಪತ್ರಿಕೆಯ ಪೂರ್ಣಿಮ ರವಿ ಮತ್ತು ವಿಶೇಷ ಬಹುಮಾನಕ್ಕೆ ಮೈಸೂರಿನ ವಿಜಯವಾಣಿ ಪತ್ರಿಕೆಯ ಕೆ.ಎಚ್. ಚಂದ್ರು ಹಾಗೂ ಕಲಬುರಗಿಯ ವಿಜಯ ಕರ್ನಾಟಕ ಪತ್ರಿಕೆಯ ಶಿವಶರಣಪ್ಪ ಬೆನ್ನೂರ್ ಅವರು ವಿಜೇತರಾಗಿದ್ದಾರೆ.
ರಾಜ್ಯಮಟ್ಟದ ಈ ಛಾಯಾಚಿತ್ರ ಸ್ಪರ್ಧೆಯ ಆಯ್ಕೆ ಸಮಿತಿಯಲ್ಲಿ ಅಧ್ಯಕ್ಷರಾಗಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಮಾಧ್ಯಮ ವಿಭಾಗದ ವಿಶೇಷ ಅಧಿಕಾರಿ ಎ.ವಿ.ಸೂರ್ಯಸೇನ್,
ಸದಸ್ಯರಾಗಿ ರಾಜ್ಯಮಟ್ಟದ ಸ್ವೀಪ್ ಹಿರಿಯ ಸಮಾಲೋಚಕರಾದ ನಿವೃತ್ತ ಐ.ಎ.ಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಛಾಯಾಚಿತ್ರ ವಿಭಾಗದ ಅಧಿಕಾರಿ ಚಂದ್ರಶೇಖರ್, ನಿವೃತ್ತ ಹಾಗೂ ಹಿರಿಯ ಛಾಯಾಗ್ರಾಹಕರಾದ ವಿಶ್ವನಾಥ್ ಸುವರ್ಣ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ಹಿರಿಯ ಸಹಾಯಕ ನಿರ್ದೇಶಕರಾದ ಜಡಿಯಪ್ಪ ಗೆದ್ಲಗಟ್ಟಿ ಅವರನ್ನು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ನೇಮಿಸಲಾಗಿತ್ತು.
ಸಾರ್ವತ್ರಿಕ ಲೋಕಸಭಾ ಚುನಾವಣೆ – 2024 ರ ಮತದಾನ ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತದಲ್ಲಿ ಜರುಗಿತ್ತು. ಜಗತ್ತಿನ ಅತಿದೊಡ್ಡ ಪ್ರಜಾಪಭುತ್ವ ದೇಶವಾಗಿರುವ ನಮ್ಮ ಭಾರತದಲ್ಲಿ ಚುನಾವಣೆಯನ್ನು ‘ಪ್ರಜಾಪ್ರಭುತ್ವದ ಹಬ್ಬ’ದಂತೆ ಆಚರಿಸಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣೆ – 2019 ಹಾಗೂ ಸಾರ್ವತ್ರಿಕ ಕರ್ನಾಟಕ ವಿಧಾನಸಭೆ ಚುನಾವಣೆ-2023 ರ ಸಂದರ್ಭದಲ್ಲಿ ಸಹ ಮಾಧ್ಯಮಗಳಲ್ಲಿ ಕಾರ್ಯ ನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಮಟ್ಟದ ಛಾಯಾ ಚಿತ್ರಸ್ಪರ್ಧೆ ಯನ್ನು ಹಮ್ಮಿಕೊಳ್ಳಲಾಗಿತ್ತು.
ಕಳೆದ ಎರಡು ಸಾರ್ವತ್ರಿಕ ಚುನಾವಣೆಗಳ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾ ಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ ಛಾಯಾಚಿತ್ರಗಳನ್ನು ಭಾರತ ಚುನಾವಣಾ ಆಯೋಗ ಪ್ರಶಂಸಿವುದರ ಜೊತೆಗೆ ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ನಮ್ಮ ರಾಜ್ಯದ ಈ ಛಾಯಾಚಿತ್ರಗಳನ್ನು ಬಳಸಿಕೊಂಡಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಸ್ತುತ ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ರ ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುತ್ತದೆ.
ರಾಜ್ಯಮಟ್ಟದ ಈ ಸ್ಪರ್ಧೆಯಲ್ಲಿ ಮಾಧ್ಯಮಗಳಲ್ಲಿ ಕಾರ್ಯ ನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರು ಸೇರಿ ಒಟ್ಟು 219 ಜನರು ಭಾಗವಹಿಸಿದ್ದರು. ಛಾಯಾಗ್ರಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಕಳುಹಿಸಿದ್ದರು. ಪ್ರಶಸ್ತಿಗೆ ಆಯ್ಕೆಯಾದ ಎಲ್ಲರಿಗೂ ಮುಖ್ಯ ಚುನಾವಣಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು