10:21 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಉಳ್ಳಾಲ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

29/05/2024, 21:09

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ 9ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ದಂತ ಚಿಕಿತ್ಸಾ, ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಉಳ್ಳಾಲ ನಗರಸಭೆ ಆವರಣದಲ್ಲಿರುವ
ಸಮುದಾಯ ಭವನದಲ್ಲಿ ಜರುಗಿತು.
ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಮತ್ತು ಮಹಿಳಾ ಘಟಕ, ಬಂಡಿಕೊಟ್ಯ, ಉಳ್ಳಾಲ ಹಾಗೂ ವಿದ್ಯಾರಣ್ಯ ಯುವಕ ವೃಂದ (ರಿ.) ಮತ್ತು ವಿದ್ಯಾರಣ್ಯ ಕಲಾವೃಂದ ಉಳ್ಳಾಲ, ಇವರುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಶ್ರೀ ಚೀರುಂಭ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರಾದ ಮಂಜಪ್ಪ ಕರ್ನಾವರ್ ಅವರ ಗೌರವ ಉಪಸ್ಥಿತಿಯಲ್ಲಿ, ಉದ್ಯಮಿ ಹಾಗೂ ಅವಿನಾಶ್ ಗ್ಯಾಸ್ ಏಜೆನ್ಸಿಯ ಮಾಲಕರಾದ ಬಿ. ಡಿ. ಗೋಪಾಲ್ ಅವರು ಉದ್ಘಾಟಿಸಿದರು.
ಯೆನೆಪೋಯ ಆಸ್ಪತ್ರೆಯ ವೈದ್ಯರಾದ ಡಾ. ಸುಪ್ರಿಯಾ ಅವರು ಮಾತನಾಡಿ, ಈ ಶಿಬಿರದಲ್ಲಿ ಉಚಿತ ದಂತ ತಪಾಸಣೆ ಮತ್ತು ಸಲಹೆ , ಹಲ್ಲುಗಳ ಶುಚೀಕರಣ, ಹಲ್ಲುಗಳ ಚಿಕ್ಕ ಚಿಕ್ಕ ಭರ್ತಿಗೊಳಿಸುವ ಚಿಕಿತ್ಸೆ, ಚಿಕಿತ್ಸೆಗೆ ಒಳಪಡದ ಮತ್ತು ಬಹಳ ಕೆಟ್ಟಿರುವ ಹಲ್ಲುಗಳನ್ನು ಕೀಳಿಸುವುದರ ಜೊತೆಗೆ ಹೆಚ್ಚಿನ ಚಿಕಿತ್ಸೆಗಾಗಿ ಹಸಿರು ಕಾರ್ಡನ್ನು ನೀಡಿ ಆಸ್ಪತ್ರೆಯಲ್ಲೂ ಹೆಚ್ಚಿನ ಸೇವೆಯನ್ನು ನೀಡಲಾಗುವುದು. ಸಾರ್ವಜನಿಕರು ಇಂತಹ ಶಿಬಿರಗಳ ಪ್ರಯೋಜನವನ್ನು ಹೆಚ್ಚು ಹೆಚ್ಚು ಪಡೆಯಬೇಕು ಎಂದರು.
ಕೆಎಂಸಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಹರ್ಬಟ್ ಪಿರೈರಾ ಅವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ಕೆಎಂಸಿ ಆಸ್ಪತ್ರೆಯು ಹಲವಾರು ಉಚಿತ ಶಿಬಿರಗಳನ್ನು ಆಯೋಜನೆ ಮಾಡಿದ್ದು, ಈ ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುವುದು, ಬಿಪಿ ಮತ್ತು ಮದುಮೇಹ ತಪಾಸಣೆ, ಎಲುಬು, ಕೀಲು, ಕಿವಿ, ಮೂಗು, ಗಂಟಲು ತಪಾಸಣೆ, ಜನರಲ್ ವೈದ್ಯಕೀಯ ಸಮಾಲೋಚನೆ, ಉಚಿತ ಔಷಧಿ ವಿತರಣೆಯನ್ನು ನೀಡಲಾಗುವುದು ಎಂದರು.
ಉಳ್ಳಾಲ ವಿದ್ಯಾರಣ್ಯ ಕಲಾವೃಂದ ಮಾಜಿ ಅಧ್ಯಕ್ಷರಾದ ರವೀಂದ್ರ ರಾಜ್ ಮಾತನಾಡಿ, ಉಳ್ಳಾಲವು ರಾಣಿ ಅಬ್ಬಕ್ಕನ ಹೆಸರಿನೊಂದಿಗೆ, ಉಳ್ಳಾಲ ಶ್ರೀನಿವಾಸ ಮಲ್ಯರಂತಹ ಮೇರು ವ್ಯಕ್ತಿತ್ವವನ್ನು ಪರಿಚಯಿಸಿದ ಊರಾಗಿದ್ದು, ಇಂತಹ ಪರಿಸರದಲ್ಲಿ ಚಿತ್ತರಂಜನ್ ಬೋಳಾರ ಅವರ ನೇತ್ರತ್ವದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಾಡುತ್ತಿರುವ ಇಂತಹ ಸಮಾಜ ಮುಖಿ ಕಾರ್ಯಕ್ರಮಗಳು ಶ್ಲಾಘನೀಯ ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಮಾತನಾಡಿ, ‘ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದು ಸಂಘದ 66ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಈ ಕಾರ್ಯಕ್ರಮವು ಉಳ್ಳಾಲದ ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘವು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರವನ್ನು ನೀಡಿದೆ. ಆರೋಗ್ಯ ಶಿಬಿರದ ಯಶಸ್ವಿಗೆ ಕಳೆದ 8 ವರ್ಷಗಳಿಂದ ಉಚಿತ ಕನ್ನಡಕವನ್ನು ನೀಡಿ ಸಹಕರಿಸುತ್ತಿರುವ ಉದ್ಯಮಿ ಹಾಗೂ ಅವಿನಾಶ್ ಗ್ಯಾಸ್ ಏಜೆನ್ಸಿಯ ಮಾಲಕರಾದ ಬಿ. ಡಿ. ಗೋಪಾಲ್ ಅವರ ಜನಪರ ಕಾಳಜಿ ಶ್ಲಾಘನೀಯ ಎಂದರು. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಕೆಎಂಸಿ ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆಯ ಆಡಳಿತ ವರ್ಗ , ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೂ ಕೃತಜ್ಞತೆಯನ್ನು ಸಲ್ಲಿಸಿದರು. ಸಂಘವು ಕಳೆದ ಆರ್ಥಿಕ ಸಾಲಿನಲ್ಲಿ 3.3 ಕೋಟಿಗೂ ಮಿಕ್ಕಿ ಲಾಭವನ್ನು ಗಳಿಸಿದ್ದು, ಅತೀ ಶೀಘ್ರದಲ್ಲಿ 33ನೇ ನೂತನ ಕೃಷ್ಣಾಪುರ ಶಾಖೆಯು ತನ್ನ ಸ್ವಂತ ಕಟ್ಟಡದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ. ನಿರ್ದೇಶಕರಾದ ರಮಾನಾಥ್ ಸನಿಲ್, ಗೋಪಾಲ್ ಎಂ., ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇದರ ಉಪಾಧ್ಯಕ್ಷರಾದ ಚಂದ್ರಹಾಸ ಮರೋಳಿ, ಕೆಎಂಸಿ ಆಸ್ಪತ್ರೆಯ ವೈದ್ಯರಾದ ಡಾ. ತನುಶ್ರೀ ಅರೋರ, ಯೆನೆಪೊಯ ಆಸ್ಪೆತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಭರತ್, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಬಂಡಿಕೊಟ್ಯ, ಉಳ್ಳಾಲ ಇದರ ಗೌರವ ಅಧ್ಯಕ್ಷರಾದ ಅಶೋಕ್ ಧರ್ಮನಗರ, ಅಧ್ಯಕ್ಷರಾದ ಪ್ರಶಾಂತ್, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾ ರೂಪಾ ಧರ್ಮನಗರ, ವಿದ್ಯಾರಣ್ಯ ಯುವಕ ವೃಂದದ ಗೌರವ ಅಧ್ಯಕ್ಷರಾದ ವಿಜಯ ಕುಮಾರ್,ವಿದ್ಯಾರಣ್ಯ ಕಲಾವೃಂದ ಉಳ್ಳಾಲ ಇದರ ಅಧ್ಯಕ್ಷರಾದ ಶ್ರೀ ಜಯ ಉಳ್ಳಾಲ, ದಕ್ಷಿಣ ಕನ್ನಡ ಜಿಲ್ಲಾ ಗಿಲ್ ನೆಟ್ ಯೂನಿಯನ್‌ನ ಅಧ್ಯಕ್ಷರಾದ ಸತೀಶ್ ಕೋಟ್ಯಾನ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 250ಕ್ಕೂ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಉಚಿತ ಓಷಧಿ, ವಿತರಣೆ, ದಂತ ಚಿಕಿತ್ಸಾ ಹಾಗೂ ನೇತ್ರ ತಪಾಸಣೆಯನ್ನು ನಡೆಸಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಾಯಕ ಪ್ರಬಂದಕರಾದ ವಿಶ್ವನಾಥ್ ಸ್ವಾಗತಿಸಿದರು. ಸಿಬ್ಬಂದಿಯಾದ ಸ್ವಾತಿ ಎಸ್. ಧನ್ಯವಾದವಿತ್ತರು. ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯ ಶಾಖಾಧಿಕಾರಿಯಾದ ಸೌಮ್ಯಲತಾ ಹಾಗೂ ಹರ್ಷಿತಾ ಮಾಡಿದರು. ಉಚಿತ ದಂತ ಚಿಕಿತ್ಸಾ, ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರದ ಸಂಯೋಜನೆಯನ್ನು ಹಿರಿಯ ಶಾಖಾಧಿಕಾರಿಯಾದ ಸಚಿನ್ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು