ಇತ್ತೀಚಿನ ಸುದ್ದಿ
ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೊ ಕಾಯ್ದೆಯಡಿ ಗ್ರಾಮ ಪಂಚಾಯಿತಿ ಸದಸ್ಯನ ಬಂಧನ
30/05/2024, 20:04
ಕಾರ್ಕಳ(reporterkarnataka.com): ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಗ್ರಾಮ ಪಂಚಾಯಿತಿ ಸದಸ್ಯನೊಬ್ಬನನ್ನು ಪೋಕ್ಸೊ ಕಾಯ್ದೆಯಡಿ ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಪುತ್ರನ್(46) ಬಂಧಿತ ಆರೋಪಿ. ಈತನ ವಿರುದ್ಧ ಪೋಕ್ಸೊ ಹಾಗೂ ದಲಿತ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ನಡು ವಯಸ್ಸಿನ ಸಂತೋಷ್ ಪುತ್ರನ್ ವಿವಾಹಿತನಾಗಿದ್ದು, ಬಾಲಕಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಬಾಲಕಿಯ ಪೋಷಕರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.