8:39 AM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ಜಾರಿ ಅಗತ್ಯ: ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಹರೀಶ್ ಆಚಾರ್ಯ

30/05/2024, 20:26

ಮಂಗಳೂರು(reporterkarnataka.com): ಶಿಕ್ಷಣ ಕ್ಷೇತ್ರ ಇಂದು ಹಲವಾರು ಸಮಸ್ಯೆಗಳ ಆಗರವಾಗಿದೆ. ಸಮಸ್ಯೆ ಪರಿಹಾರಕ್ಕೆ ಶಿಕ್ಷಕರ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ಜಾರಿಗೊಳ್ಳುವ ಅಗತ್ಯ ಇದೆ ಎಂದು ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಎಸ್.ಆರ್ ಹರೀಶ್ ಆಚಾರ್ಯ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಶಿಕ್ಷಕ ಸಮುದಾಯದ ಸಮಸ್ಯೆಗಳು ಮುಗಿಯದ ಗೋಳಾಗಿದೆ. ಈ ಸಮಸ್ಯೆಗಳು ಮುಗಿಯುವ ಬದಲಾಗಿ ದಿನೇದಿನೆ ಜಟಿಲಗೊಳ್ಳುತ್ತಿದೆ. ಇದಕ್ಕೆ ಪರಿಹಾರ ಒದಗಿಸುವುದು ನನ್ನ ಸ್ಪರ್ಧೆಯ ಉದ್ದೇಶ ಎಂದರು.
ರಾಜ್ಯದ ಪ್ರಸ್ತುತ ಕರ್ನಾಟಕ ನಾಗರಿಕ ಸೇವಾ ಅಧಿ ನಿಯಮ ಇದು ಶಿಕ್ಷಕರ ಸಮಸ್ಯೆಗಳನ್ನು ಎದುರಿಸುವಲ್ಲಿ ಅತ್ಯಂತ ದುರ್ಬಲವಾಗಿದೆ. ಆದುದರಿಂದ ಶಿಕ್ಷಕರ ಪ್ರತ್ಯೇಕ ಸೇವಾ ಅಧಿನಿಯಮದ ಕಾಯ್ದೆ ಜಾರಿಗೊಳ್ಳುವ ಅಗತ್ಯ ಇದೆ ಎಂದು ಅವರು ನುಡಿದರು.
ಖಾಸಗಿ ಶಾಲಾ -ಕಾಲೇಜು/ ಸರಕಾರಿ ಶಾಲಾ-ಕಾಲೇಜು/ ಅನುದಾನಿತ ಶಾಲಾ -ಕಾಲೇಜು ಶಿಕ್ಷಕರ ಸಮಸ್ಯೆಗಳು, ದೈಹಿಕ ಶಿಕ್ಷಣ ಹಾಗೂ ಕಲಾ ಮತ್ತು ಕಸೂತಿ ಶಿಕ್ಷಕರ ಸಮಸ್ಯೆಗಳು, ವಸತಿ ಶಾಲಾ ಶಿಕ್ಷಕರ ಸಮಸ್ಯೆಗಳು, ಭಡ್ತಿ ಹೊಂದಿದ ಶಿಕ್ಷಕರ ಸಮಸ್ಯೆಗಳು, ಮುಖ್ಯೋಪಾಧ್ಯಾಯರು ಹಾಗೂ ಪ್ರಾಂಶುಪಾಲರ ಸಮಸ್ಯೆಗಳು, ಪಿಂಚಣಿಯ ಸಮಸ್ಯೆ, ಭರ್ತಿಯಾಗದೆ ಖಾಲಿ ಇರುವ ಶಿಕ್ಷಕ ಹುದ್ದೆಗಳ ಸಮಸ್ಯೆಗಳು, ಪರೀಕ್ಷಾ ಹಾಗೂ ಮೌಲ್ಯಮಾಪನ ಕಾರ್ಯ ನಿರ್ವಹಣಾ ಸಮಸ್ಯೆಗಳು ಇವೇ ಇತ್ಯಾದಿ ವಿಷಯಗಳು ಯಾವುದೇ ಪರಿಹಾರವನ್ನು ಕಾಣದೆ, ಪರಿಹಾರಗೊಳ್ಳುವ ನಿರೀಕ್ಷೆಯೂ ಇಲ್ಲದೆ ಹಾಗೆಯೇ ಮುಂದುವರಿಯುತ್ತಿದೆ ಎಂದವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು