11:28 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಬಂಟ್ವಾಳ: ವಿಶ್ವ ತಂಬಾಕು ನಿಷೇಧ ದಿನಾಚರಣೆ; ಕಾನೂನು ಮಾಹಿತಿ ಕಾರ್ಯಕ್ರಮ

30/05/2024, 21:25

ಬಂಟ್ವಾಳ(reporterkarnataka.com): ಮೋಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ, ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಕ್ರಮ ಗುರುವಾರ ಆಯೋಜಿಸಲಾಯಿತು.


ಬಂಟ್ವಾಳ ಜೆಎಂಎಫ್ ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ
ಚಂದ್ರಶೇಖರ ವೈ ತಳವಾರ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಮೆಲ್ ಕಾಲೇಜು ಪ್ರಾಂಶುಪಾಲರಾದ ಡಾ. ಲತಾ ಫೆರ್ನಾಂಡಿಸ್ ಎ.ಸಿ., ,ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹರಣಿ ಕುಮಾರಿ ಡಿ, (ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ಕಾರ್ಯನಿರ್ವಾಹಕ ಕಾರ್ಯದರ್ಶಿ, ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ), ನಿರ್ಮಲಾ ಶೆಟ್ಟಿ (ಕೋಶಾಧಿಕಾರಿ, ವಕೀಲರ ಸಂಘ (ರಿ ), ಬಂಟ್ವಾಳ), ಸಂಪನ್ಮೂಲ ವ್ಯಕ್ತಿ ಆಶಾಮಣಿ ಡಿ ರೈ, (ಹಿರಿಯ ವಕೀಲರು ಬಂಟ್ವಾಳ), ನಿಹಾರಿಕಾ ಶೆಟ್ಟಿ(ಸಂಯೋಜಕರು ಮಾನವ ಹಕ್ಕುಗಳ ಸಂಘ) ಹಾಗೂ ವಿಜೇತಾ (ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಾರ್ಮೆಲ್ ಕಾಲೇಜು ಮೊಡಂಕಾಪು) ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಆಶಾಮಣಿ ಡಿ. ರೈ, ವಿಶ್ವ ತಂಬಾಕು ನಿಷೇಧ ಕಾಯ್ದೆಯ ಬಗ್ಗೆ ಕಾನೂನು ಮಾಹಿತಿಯನ್ನು ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರಿಗೆ ನೀಡಿದರು.
ಚಂದ್ರಶೇಖರ ವೈ ತಳವಾರ ಅವರು ವಿದ್ಯಾರ್ಥಿಗಳು ಮಾದಕ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದೆ ಕಲಿಕೆಯ ಮೇಲೆ ಗಮನವನ್ನು ಇಟ್ಟುಕೊಳ್ಳಬೇಕು ಎಂಬ ಮಾಹಿತಿಯನ್ನು ನೀಡಿದರು.


ಪ್ರಾಂಶುಪಾಲರಾದ ಡಾ. ಲತಾ ಫೆರ್ನಾಂಡಿಸ್ ಎ.ಸಿ., ವಿದ್ಯಾರ್ಥಿಗಳ ಜೀವನದಲ್ಲಿ ಪದವಿ ಘಟ್ಟವು ಅತಿ ಮುಖ್ಯವಾಗಿದ್ದು ಯಾವುದೇ ದುಶ್ಚಟಗಳಿಗೆ ಒಳಗಾಗದೆ ಸುಂದರ ಜೀವನವನ್ನು ಕಟ್ಟಿಕೊಳ್ಳಬೇಕು ಎಂಬ ಸಂದೇಶ ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರೇಕ್ಷಾ ನಡೆಸಿಕೊಟ್ಟರು. ಝಹಿದಾ ಸ್ವಾಗತಿಸಿದರು. ಅಲ್ವಿಶ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು