7:25 PM Tuesday18 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ನ್ಯಾಯಾಲಯದ ಕಾರ್ಯ ಮಾಡಲು ಮುಂದಾಗಬೇಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಗೆ ಹೈಕೋರ್ಟ್ ತೀವ್ರ ತರಾಟೆ

31/05/2024, 18:30

ಬೆಂಗಳೂರು(reporterkarnataka.com): ಶಾಸಕರು ಕಾನೂನು ಮಾಡುವ ಕೆಲಸ ಮಾಡಬೇಕು. ನ್ಯಾಯಾಲಯದ ಕಾರ್ಯವನ್ನು ನೀವು ಮಾಡಲು ಮುಂದಾಗಬೇಡಿ. ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದ್ದಲ್ಲಿ ಹೇಬಿಯಸ್ ಕಾರ್ಪಸ್ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಅದು ಬಿಟ್ಟು ನ್ಯಾಯಾಲಯದ ಕಾರ್ಯವನ್ನು ನೀವು ಮಾಡಲು ಮುಂದಾಗಬೇಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ತನ್ನ ಮೇಲೆ ಬೆಳ್ತಂಗಡಿ ಪೊಲೀಸರು ಹಾಕಿರುವ ಎರಡು ಎಫ್ ಐಆರ್ ರದ್ದತಿ ಕೋರಿ ಶಾಸಕ ಹರೀಶ್ ಪೂಂಜ ಅವರು ಹೈಕೋರ್ಟಿಗೆ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಶಾಸಕರ ನಡೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಬಂಧನ ಪ್ರಕರಣ ನಡೆದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾದೀಶರಿದ್ದಾರೆ. ನ್ಯಾಯಾಲಯದ ಕಾರ್ಯವನ್ನು ನೀವು ಮಾಡಲು ಮುಂದಾಗಬೇಡಿ. ನಿಮ್ಮ ಕೆಲಸ ಕಾನೂನು ಮಾಡುವುದು. ಅದನ್ನು ಮಾಡಿ. ನ್ಯಾಯಾಲಯಕ್ಕೆ ತನ್ನ ಕಾರ್ಯ ಮಾಡಲು ಬಿಡಿ. ಮುಂದೊಂದು ದಿನ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಾರೆ ಎಂದು ನಮ್ಮ ಹಿಂದೆ ಬಂದು ಕುಳಿತರೆ, ನಾವು ಕೆಲಸ ಮಾಡುವುದು ಹೇಗೆ? ಈ ರೀತಿಯ ವರ್ತನೆಯನ್ನು ಸಹಿಸಲು ಆಗುವುದಿಲ್ಲ ಎಂದು ಹೈಕೋರ್ಟ್ ಪೀಠ ಎಚ್ಚರಿಕೆ ನೀಡಿತು.
ನೀವು ಠಾಣೆಗೆ ಹೋಗಬಾರದಿತ್ತು. ಯಾವುದೇ ವ್ಯಕ್ತಿಯನ್ನು ಬಂಧಿಸಿದ್ದಲ್ಲಿ ಕಾನೂನು ಪ್ರಕಾರ ಪ್ರಕ್ರಿಯೆ ನಡೆಸಬೇಕು. ಶಾಸಕರು ಠಾಣೆಗೆ ಹೋದರೆ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುವುದು ಹೇಗೆ ಎಂದು ನ್ಯಾಯಮೂರ್ತಿ ಖಾರವಾಗಿಯೇ ಪ್ರಶ್ನಿಸಿದರು.
ಅಕ್ರಮ ಗಣಿಗಾರಿಕೆ ಮತ್ತು ಸ್ಫೋಟಕ ದಾಸ್ತಾನು ಇಟ್ಟ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಠಾಣೆಗೆ ಹೋಗಿ ಸಬ್ ಇನ್ಸ್‌ಪೆಕ್ಟರ್ ಅವರಲ್ಲಿ ಪೊಲೀಸ್ ಠಾಣೆ ನಿಮ್ಮ ಅಪ್ಪಂದಾ? ಎಂದು ಪ್ರಶ್ನಿಸಿ ಪೊಲೀಸರಿಗೆ ದಬಾಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು