11:24 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಪರ ಮಾಜಿ ಶಾಸಕ ಹರ್ಷವರ್ಧನ್ ಪ್ರಚಾರ

31/05/2024, 23:13

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಪದವೀಧರ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿವೇಕಾನಂದ ಅವರ ಪರ ಮಾಜಿ ಶಾಸಕ ಹರ್ಷವರ್ಧನ್ ಅವರು ಇಂದು ನಂಜನಗೂಡಿನಲ್ಲಿ ಬಿರುಸಿನ ಮತ ಪ್ರಚಾರ ನಡೆಸಿದರು.


ನಂಜನಗೂಡು ಪಟ್ಟಣದ ಜೆಎಸ್ಎಸ್ ಕಾಲೇಜು, ಸರ್ಕಾರಿ ಪದವಿ ಕಾಲೇಜು, ಕಾರ್ಮೆಲ್, ಸಿಟಿಜನ್ ಶಿಕ್ಷಣ ಸಂಸ್ಥೆಗಳಿಗೆ ತೆರಳಿ ಶಿಕ್ಷಕರುಗಳನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು.
ಬಳಿಕ ಅವರು ಮಾತನಾಡಿ, ನಮ್ಮ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ ಅವರನ್ನು ಕಣಕ್ಕಿಳಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸತತವಾಗಿ ನಾಲ್ಕು ಬಾರಿ ಪ್ರತಿನಿಧಿಸಿದ್ದಾರೆ. ಹಾಗಾಗಿ ಶಿಕ್ಷಕರೆಲ್ಲರೂ ಈ ಬಾರಿ ಹೊಸಬರನ್ನು ಆಯ್ಕೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ. ನಾನು ಶಾಸಕನಾಗಿ ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಶಾಲಾ ಕಾಲೇಜುಗಳಿಗೆ ಅನುದಾನ ತಂದು ಅಭಿವೃದ್ಧಿ ಮಾಡಿರುವುದಲ್ಲದೆ ತಮ್ಮಗಳ ಅನುಕೂಲಕ್ಕಾಗಿ ಗುರುಭವನ ನಿರ್ಮಾಣಕ್ಕೆ 20 ಗುಂಟೆ ಜಾಗ ಹಾಗೂ 25 ಲಕ್ಷ ಅನುದಾನ ಮಂಜೂರು ಮಾಡಿದ್ದೇನೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಪ್ರಜ್ಞಾವಂತರಾದ ತಾವು ಈ ಬಾರಿ ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರಿಗೆ ಮತ ನೀಡಿ ಗೆಲ್ಲಿಸುವ ಮೂಲಕ ತಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡರು.
ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ಬಿಜೆಪಿ ಮಂಡಲ ಅಧ್ಯಕ್ಷ ಕೆಂಡಗಣ್ಣಪ್ಪ, ನಗರ ಘಟಕದ ಅಧ್ಯಕ್ಷ ಸಿದ್ದರಾಜು, ನಗರಸಭಾ ಸದಸ್ಯ ಮಹದೇವ ಪ್ರಸಾದ್, ಮುಖಂಡರುಗಳಾದ ಶಿವಣ್ಣ, ಪುಟ್ಟಸ್ವಾಮಿ,ಸಿದ್ದರಾಜು, ಶಂಕ್ರಪ್ಪ, ಬಾಲಚಂದ್ರು, ಪ್ರೇಮ ಶಂಭಯ್ಯ, ಮಹೇಶ್, ಪರಶಿವಮೂರ್ತಿ, ಕುಮಾರ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು