ಇತ್ತೀಚಿನ ಸುದ್ದಿ
ವಿಧಾನ ಪರಿಷತ್ ಚುನಾವಣೆ: ಬಿಜೆಪಿಯಿಂದ ಮಾಜಿ ಸಚಿವ ಸಿ.ಟಿ. ರವಿ ಸಹಿತ 3 ಮಂದಿಗೆ ಟಿಕೆಟ್
02/06/2024, 14:41
ಹೊಸದಿಲ್ಲಿ(reporterkarnataka.com): ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು, ಮಾಜಿ ಸಚಿವ ಸಿ.ಟಿ ರವಿ ಅವರಿಗೆ ಟಿಕೆಟ್ ದೊರೆತಿದೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಟಿಕೆಟ್ ನೀಡಿದೆ. ಒಕ್ಕಲಿಗ ಸಮುದಾಯದಿಂದ ಸಿ.ಟಿ ರವಿ, ಒಬಿಸಿ ವರ್ಗದಲ್ಲಿ ಎನ್. ರವಿಕುಮಾರ್ ಹಾಗೂ ಎಂ.ಜಿ ಮುಳೆ ಅವರಿಗೆ ಟಿಕೆಟ್ ನೀಡಲಾಗಿದೆ. ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ.