6:39 PM Thursday16 - January 2025
ಬ್ರೇಕಿಂಗ್ ನ್ಯೂಸ್
ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣ: ಶಾಸಕ ಕಾಮತ್

19/05/2021, 19:16

ಮಂಗಳೂರು(reporterkarnataka news):

ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ 1.37 ಕೋಟಿ ವೆಚ್ಚದಲ್ಲಿ ವಿಎಸ್ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ ಕಾಮಗಾರಿ ನಾಳೆಯಿಂದ ಪ್ರಾರಂಭವಾಗಲಿದೆ ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ಹೇಳಿದರು. 

ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣದ ಸ್ಥಳ ವೀಕ್ಷಣೆ ನಡೆಸಿ ಮಾತನಾಡಿದ ಶಾಸಕ ಕಾಮತ್, ಪ್ರಾಯೋಗಿಕವಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ 10 ಜಿಲ್ಲಾ ಆಸ್ಪತ್ರೆಗಳಲ್ಲಿ ಪಿಎಸ್ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕ ಅಳವಡಿಸುವ‌ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಆ ನಿಟ್ಟಿನಲ್ಲಿ ನಾಳೆಯಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕದ ನಿರ್ಮಾಣ ಕಾಮಗಾರಿಗಳು ಪ್ರಾರಂಭವಾಗಲಿದೆ ಎಂದರು.

ಈಗಾಗಲೇ ಸಂಸದ ನಳಿನ್ ಕುಮಾರ್ ಕಟೀಲ್ ಅವರ ವಿಶೇಷ ಪ್ರಯತ್ನದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ.ಆರ್.ಪಿ.ಎಲ್‌ ಸಂಸ್ಥೆಯ ಸಿಆರ್ ಎಫ್ ನಿಧಿಯಲ್ಲಿ 2 ಕೆಎಲ್ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಹಾಗಾಗಿ ಇನ್ನು ಕೆಲವೇ ದಿನಗಳಲ್ಲಿ 2 ಆಕ್ಸಿಜನ್ ಪ್ಲಾಂಟ್`ಗಳೂ ಕೂಡ ಜನರ ಸೇವೆಗೆ ಲಭ್ಯವಾಗಲಿದೆ.  ಈ ಹಿಂದೆ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತಿನಿತ್ಯ 2.5 ಕೆ.ಎಲ್ ಆಕ್ಸಿಜನ್ ಸಾಕಾಗುತಿತ್ತು. ಆದರೆ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಆಕ್ಸಿಜನ್ ಬೇಡಿಕೆ ಹೆಚ್ಚಾಗಿದ್ದು ಸರಿಸುಮಾರು 5 ಕೆ.ಎಲ್ ಆಕ್ಸಿಜನ್ ಬೇಡಿಕೆಯಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಸದ್ಯ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನೀಡುತ್ತಿರುವ ಆಮ್ಲಜನಕ ನಿರ್ಮಾಣ ಘಟಕದಿಂದ ವೆನ್ಲಾಕ್ ಆಸ್ಪತ್ರೆಗೆ ಆಕ್ಸಿಜನ್ ಸಂಪನ್ಮೂಲವನ್ನು ಒದಗಿಸಿದಂತಾಗಿದೆ. ಈ ಪ್ಲಾಂಟ್ ನಿರ್ಮಾಣದಿಂದ ಪ್ರತಿನಿತ್ಯ 1 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದಿಸಬಹುದು. ಇದರಿಂದಾಗಿ ಮೆಡಿಕಲ್ ಆಕ್ಸಿಜನ್ ಸರಬರಾಜುದಾರರ ಮೇಲೆ ಅವಲಂಬಿತವಾಗುವುದನ್ನು ಕಡಿಮೆಗೊಳಿಸಬಹುದಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಆಕ್ಸಿಜನ್ ಉತ್ಪಾದನಾ ಘಟಕವನ್ನು ವೆನ್ಲಾಕ್ ಆಸ್ಪತ್ರೆಗೆ ನೀಡಿದ ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ, ಆರೋಗ್ಯ ಸಚಿವ ಡಾ. ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಶಾಸಕ ಕಾಮತ್ ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆ ಮುಖ್ಯ ಸಚೇತಕ ಸುಧೀರ್‌ ಶೆಟ್ಟಿ ಕಣ್ಣೂರು, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಾಧಾಕೃಷ್ಣ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ, ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಅಧ್ಯಕ್ಷ ಡಾ. ಅಣ್ಣಯ್ಯ ಕುಲಾಲ್,ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ್ ಶೇಣವ, ಮುಖಂಡರಾದ ಸಚಿನ್ ರಾಜ್ ರೈ, ಮೋಹನ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು