10:48 AM Tuesday18 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಎಲ್ಲರ ಚಿತ್ತ ಲೋಕಸಭೆ ಎಲೆಕ್ಷನ್ ಕೌಂಟಿಂಗ್ ನತ್ತ: ಯಾರಿಗೆ ಗೆಲುವು? ಯಾರಿಗೆ ಸೋಲು?; ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ

04/06/2024, 08:19

ಹೊಸದಿಲ್ಲಿ(reporterkarnataka.com): ಎಲ್ಲರ ದೃಷ್ಟಿ ಲೋಕಸಭೆ ಚುನಾವಣೆಯ ಮತ ಎಣಿಕೆಯತ್ತ ಹೊರಳಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ ಲಭಿಸಲಿದೆ.
543 ಸದಸ್ಯರ ಲೋಕಸಭೆಗೆ ಸ್ಥಾನಗಳ ಪೈಕಿ 541 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಸೂರತ್ ಮತ್ತು ಇಂದೋರ್ ನ ಎರಡು
ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ.
ಲೋಕಸಭೆಗೆ 7 ಹಂತಗಳಲ್ಲಿ ಮತದಾನ ನಡೆದಿದೆ. ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಪ್ರಜಾಪ್ರಭುತ್ವ ದ ಮಹಾ ಹಬ್ಬ ಜರುಗಿದೆ. ಏಪ್ರಿಲ್ 19 (ಹಂತ 1), ಏಪ್ರಿಲ್ 26 (ಹಂತ 2), ಮೇ 7 (ಹಂತ 3), ಮೇ 13 (ಹಂತ 4) ರಂದು ಮತದಾನ ನಡೆಯಿತು. ಮೇ 20 (ಹಂತ 5), ಮೇ 25 (ಹಂತ 6), ಮತ್ತು ಜೂನ್ 1 (ಹಂತ 7) ಮುಗಿಯುವುದರೊಂದಿಗೆ ಮತದಾನ ಪ್ರಕ್ರಿಯೆ ಸಮಾಪ್ತಿಯಾಗಿದೆ.
ಚುನಾವಣಾ ಆಯೋಗದ ಪ್ರಕಾರ, ಲೋಕಸಭಾ ಚುನಾವಣೆಗಳು, ಆಂಧ್ರಪ್ರದೇಶ ಮತ್ತು ಒಡಿಶಾದ ರಾಜ್ಯ ವಿಧಾನಸಭೆಗಳು ಮತ್ತು ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳನ್ನು ಒಳಗೊಂಡಿರುವ ಮತ ಎಣಿಕೆಯು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು