8:35 PM Friday4 - July 2025
ಬ್ರೇಕಿಂಗ್ ನ್ಯೂಸ್
ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು?

ಇತ್ತೀಚಿನ ಸುದ್ದಿ

ಮೈತ್ರಿ ಕಾರ್ಯಕರ್ತರು ಶಕ್ತಿ ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ: ಚಿತ್ರದುರ್ಗದಿಂದ ಗೆಲುವು ಕಂಡ ಬಿಜೆಪಿ ಅಭ್ಯರ್ಥಿ ಕಾರಜೋಳ ಪ್ರತಿಕ್ರಿಯೆ

04/06/2024, 20:04

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಭರ್ಜರಿ ಗೆಲುವು ಸಾಧಿಸಿದ್ದಾರೆ. 47065 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರ ವಿರುದ್ಧ ಗೆದ್ದು ಬೀಗಿದ್ದಾರೆ. ಜಿಲ್ಲೆಗೆ ಹೊಸಬ ಆಗಿದ್ರು ವಿಶ್ವಾಸ ಇಟ್ಟು ಆಯ್ಕೆ ಮಾಡಿದ್ದಾರೆ. ಹೊರಗಿನವರು, ಸ್ಥಳೀಯರು ಎಂಬ ಚರ್ಚೆ ನಡುವೆ ಗೆಲುವು ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಕಾರಜೋಳ ಅವರು ಜಿಲ್ಲೆಯಲ್ಲಿ ನನಗೆ ಸಾಕಷ್ಟು ವಿರೋಧ ಇರಲಿಲ್ಲ. ಪಕ್ಷದ ಅಧ್ಯಕ್ಷರು ಎಲ್ಲರೂ ಸಹಕಾರ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚಿ ಮತದಾರರು ಮೂರನೇ ಬಾರಿಗೆ ಬಹುಮತಕ್ಕೆ ಅವಕಾಶ ನೀಡಿದ್ದಾರೆ. ಪಕ್ಷದ ನಾಯಕರು ನಿರ್ಧಾರ ಮಾಡಿ ಅಭ್ಯರ್ಥಿ ಮಾಡಿದ್ದರು. ಆಗ ಸಮಯ ಇರಲಿಲ್ಲ. ನಾನು ನಾಮಪತ್ರ ಸಲ್ಲಿಕೆಗೆ ಮಾತ್ರ ಬಂದೆ. ಮೈತ್ರಿ ಕಾರ್ಯಕರ್ತರು ಶಕ್ತಿ ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗೋದು ದೇಶದ ಜನರ ಆಶಯವಾಗಿತ್ತು. ಮೋದಿಯನ್ನು ಮೆಚ್ಚಿ ಮೂರನೇ ಬಾರಿಗೆ ಬಹುಮತ ಕೊಟ್ಟಿದ್ದಾರೆ. ನಮ್ಮ ಪಕ್ಷದ ವರಿಷ್ಠರಿಗೆ, ರಾಜ್ಯ ನಾಯಕರಿಗೆ ಮತದಾರರಿಗೆ ಧನ್ಯವಾದ ಅರ್ಪಿಸುತ್ತೇನೆ. ಜನರ ಆಸೆ ಇದು ಜಿಲ್ಲೆಯ ಅಭಿವೃದ್ದಿ ಆಗಬೇಕು ಎನ್ನುವುದಿದೆ.
ಅಭಿವೃದ್ಧಿ ಬೇಡಿಕೆಗಳ ಅರಿತು ಕೇಂದ್ರದಿಂದ ಏನು ಜಿಲ್ಲೆಗೆ ಅಭಿವೃದ್ಧಿ ಆಗಬೇಕು ಅದನ್ನು ಮಾಡ್ತೀನಿ ಎಂದು ಭರವಸೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು