ಇತ್ತೀಚಿನ ಸುದ್ದಿ
ಹಿಂಸೆಗೆ ಎಂದೂ ಬೆಂಬಲವಿಲ್ಲ; ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ವಿಂದರ್ ಕೌರ್ ಗೆ ನಾನು ಕೆಲಸ ಕೊಡುತ್ತೇನೆ: ಗಾಯಕ ವಿಶಾಲ್ ದದ್ಲಾನಿ
08/06/2024, 17:17

ಮುಂಬೈ(reporterkarnataka.com): ಹಿಂಸೆಯನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಆದರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿಯ ಸಿಟ್ಟು ಏನು ಎಂಬುದು ನನಗೆ ಚೆನ್ನಾಗಿ ಅರ್ಥ ಆಗುತ್ತದೆ. ನಟಿ, ಸಂಸದೆ ಕಂಗನಾ ರಣಾವತ್ ಅವರಿಗೆ ಕಪಾಳಮೋಕ್ಷ ಮಾಡಿ ಕೆಲಸ ಕಳೆದುಕೊಂಡ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರು ತಾನು ನೌಕರಿ ಕೊಡಿಸುವುದಾಗಿ ಜಯಪ್ರಿಯ ಗಾಯಕ, ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿ ಹೇಳಿದ್ದಾರೆ.
ಗಾಯಕ ವಿಶಾಲ್ ದದ್ಲಾನಿ ಅವರು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ಕುಲ್ವಿಂದರ್ ಕೌರ್ ವಿರುದ್ಧ ಸಿಐಎಸ್ಎಫ್ನವರು ಏನಾದರೂ ಕ್ರಮ ಕೈಗೊಂಡರೆ, ಅವರಿಗಾಗಿ ನನ್ನಲ್ಲಿ ಉದ್ಯೋಗ ಕಾದಿರುತ್ತದೆ ಎಂಬುದನ್ನು ನಾನು ಖಚಿತಪಡಿಸುತ್ತೇನೆ. ಜೈ ಹಿಂದ್, ಜೈ ಜವಾನ್, ಕೈ ಕಿಸಾನ್’ ಎಂದು ವಿಶಾಲ್ ದದ್ಲಾನಿ ಬರೆದುಕೊಂಡಿದ್ದಾರೆ.
ಚಂಡಿಗಢ ವಿಮಾನ ನಿಲ್ದಾಣದಲ್ಲಿ ಕಂಗನಾ ಅವರಿಗೆ
ಕಪಾಳಮೋಕ್ಷ ಮಾಡಲಾಗಿತ್ತು.