12:45 PM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ನಂಜನಗೂಡು: ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸುತ್ತೂರು ಶ್ರೀ ಚಾಲನೆ

08/06/2024, 20:18

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಗರದ ಜೆಎಸ್ಎಸ್ ಮಂಗಳ ಮಂಟಪದಲ್ಲಿ ರೋಟರಿ ಕ್ಲಬ್, ಇನ್ನರ್ ವೀಲ್ಸ್ ಹಾಗೂ ಔಷಧಿ ಇತರಕರ ಸಂಘ ಮತ್ತು ಜೆಎಸ್ಎಸ್ ಆಸ್ಪತ್ರೆ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಉದ್ಘಾಟನೆ ಮಾಡಿದರು.
ಬಳಿಕ ಮಾತನಾಡಿದ ಅವರು, ಮನುಷ್ಯನಿಗೆ ಆರೋಗ್ಯ ಮುಖ್ಯ. ಆರೋಗ್ಯ ಚೆನ್ನಾಗಿದ್ದರೆ ಮನುಷ್ಯ ಏನಾದರು ಸಾಧಿಸುತ್ತಾನೆ.
ನಿಯಮಿತ ಆಹಾರದ ಸೇವನೆ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಅನುವಂಶಿಯಿಂದ ಬರುವ ಕಾಯಿಲೆಗಳನ್ನು ತಾವೇ ಊಟೋಪಚಾರಗಳಿಂದ ಸರಿಪಡಿಸಿಕೊಳ್ಳಬೇಕು.
ಆರೋಗ್ಯ ತಪಾಸಣೆ ಯನ್ನು ವರ್ಷಕ್ಕೊಮ್ಮೆಯಾದರು ಮಾಡಿಸಿಕೊಳ್ಳಬೇಕು.


ಕಾಲ ಕಾಲಕ್ಕೆ ತಪಾಸಣೆ ಮಾಡಿಕೊಂಡು ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.
ರೋಟರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪದ್ಮನಾಥ್ ರಾವ್ ಮಾತನಾಡಿ ಬಡವರು ಹಾಗೂ ಅಶಕ್ತರ ಅನುಕೂಲಕ್ಕಾಗಿ ನಮ್ಮ ರೋಟರಿ ಸಂಸ್ಥೆ ಹಾಗೂ ಜೆ ಎಸ್ ಎಸ್ ಆಸ್ಪತ್ರೆ ವತಿಯಿಂದ ಪ್ರತಿ ವರ್ಷ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.
ಶಿಬಿರದಲ್ಲಿ ಸುಮಾರು 500ಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ವಿವಿಧ ಕಾಯಿಲೆಗಳಿಗೆ ತಪಾಸಣೆ ಮಾಡಿಸಿ ಕೊಂಡು ವೈದ್ಯರದಿಂದ ಸೂಕ್ತ ಸಲಹೆ ಸೂಚನೆಗಳನ್ನು ಪಡೆದುಕೊಂಡರು.
ಇನ್ನು ನುರಿತ ವೈದ್ಯರುಗಳಿಂದ ವೈದ್ಯಕೀಯ ತಪಾಸಣೆ ಮತ್ತು ಸಾಮಾನ್ಯ ಕಾಯಿಲೆಗಳಿಗೆ ಸಲಹೆ, ಬಿಪಿ, ಶುಗರ್, ಸ್ತ್ರೀ ರೋಗ ತಪಾಸಣೆ, ಮಕ್ಕಳ ರೋಗ, ಹೃದಯ ಸಂಬಂಧಿ ಸಮಸ್ಯೆಗಳು ಕಣ್ಣು, ಕಿವಿ, ಮೂಗು ಮತ್ತು ಗಂಟಲು ತೊಂದರೆಗಳು ಕೀಲು ಮತ್ತು ಮೂಳೆ ಚರ್ಮದ ಸಮಸ್ಯೆ, ಜಠರ ರೋಗ, ಮೂತ್ರ ರೋಗ ತಪಾಸಣೆ ಸೇರಿದಂತೆ ಹಲವು ಕಾಯಿಲೆಗಳಿಗೆ ತಪಾಸಣೆ ನಡೆಸಲಾಯಿತು.
ನಂಜನಗೂಡು ತಾಲೂಕು ಔಷಧಿ ವಿತರಕರ ಸಂಘದ ವತಿಯಿಂದ ಶಿಬಿರ ದಲ್ಲಿ ಪಾಲ್ಗೊಂಡ ಎಲ್ಲಾ ರೋಗಿಗಳಿಗೂ ಉಚಿತ ಔಷಧಿ ವಿತರಣೆ ಮಾಡಲಾಯಿತು.
ಇದೇ ಸಂದರ್ಭ ಶ್ರೀಗಳು ಸೇರಿದಂತೆ ಶಿಬಿರಕ್ಕೆ ಸಹಾಯ ಮಾಡಿದ ಸಹಾಯಾರ್ತಿಗಳು ಹಾಗೂ ರೋಟರಿ ಸಂಘದ ಪದಾಧಿಕಾರಿಗಳನ್ನು ಸಂಸ್ಥೆ ವತಿಯಿಂದ ಅಭಿನಂದಿಸಲಾಯಿತು. ಚುಂಚನಹಳ್ಳಿ ಮಠದ ಶ್ರೀ ಚನ್ನಬಸವಸ್ವಾಮೀಜಿ, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್, ರೋಟರಿ ಸಂಸ್ಥೆಯ ಅಧ್ಯಕ್ಷ, ರಮೇಶ್, ಜೆಎಸ್ಎಸ್ ಆಸ್ಪತ್ರೆಯ ಉಪ ಅಧೀಕ್ಷಕರಾದ ಡಾ. ನವೀನ್, ನಿರಂಜನ್ , ಗುತ್ತಿಗೆದಾರ ಪದ್ಮನಾಭರಾವ್, ರೋಟರಿ ಕಾರ್ಯದರ್ಶಿ ಪ್ರಕಾಶ್ ಚಂದ್ ಜೈನ್, ಸಹಾಯ ಗೌರ್ನರ್ ಕೆ ಜಿ ರಾಮಚಂದ್ರ, ಡಾ.ಶ್ರೀಕಾಂತ್, ಔಷದಿ ವಿತರಕರ ಸಂಘದ ಅಧ್ಯಕ್ಷ ಸುರೇಂದ್ರ ಆಸ್ಪತ್ರೆ ಎಚ್ಆರ್ ಮಲ್ಲಿಕಾರ್ಜುನ, ಇನ್ನರ್ ವೀಲ್ ಅಧ್ಯಕ್ಷೆ ಚೇತನ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು