4:38 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಮೋದಿ ಪ್ರಮಾಣ ವಚನಕ್ಕೆ ಕ್ಷಣಗಣನೆ ಆರಂಭ: ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯದಿಂದ 5 ಮಂದಿಗೆ ಸಚಿವ ಸ್ಥಾನ?

09/06/2024, 15:54

ನವದೆಹಲಿ(reporterkarnataka.com): ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರದ ಪ್ರತಿಜ್ಞೆ ಸ್ವೀಕಾರ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದಿಂದ 5 ಮಂದಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯದಿಂದ ಕ್ಯಾಬಿನೆಟ್‌ ಖಾತೆ ಸಚಿವರಾಗಿ ಪ್ರಹ್ಲಾದ್‌ ಜೋಶಿ, ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಮತ್ತು ಜೆಡಿಎಸ್‌ನ ಎಚ್‌.ಡಿ. ಕುಮಾರಸ್ವಾಮಿ ಅವರು ಅಧಿಕಾರ ವಹಿಸಲಿದ್ದಾರೆ. ಶೋಭಾ ಕರಂದ್ಲಾಜೆ ಮತ್ತು ಗೋವಿಂದ ಕಾರಜೋಳ ಅಥವಾ ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಿಗಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ರಾಜ್ಯದ ಐವರು ಸಂಪುಟ ಸಭೆ ಸೇರಲಿದ್ದಾರೆ ಎನ್ನಲಾಗುತ್ತಿದ್ದು, ಅಚ್ಚರಿ ಎನ್ನುವಂತೆ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ.ಸೋಮಣ್ಣ ಅವರು ಮೋದಿ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಕ್ಯಾಬಿನೆಟ್‌ ಖಾತೆ ಸಚಿವರಾಗಿ ಪ್ರಹ್ಲಾದ್‌ ಜೋಶಿ, ನಿರ್ಮಲಾ ಸೀತಾರಾಮನ್ ಮತ್ತು ಜೆಡಿಎಸ್‌ನ ಎಚ್‌.ಡಿ. ಕುಮಾರಸ್ವಾಮಿ ಅವರು ಆಯ್ಕೆಯಾಗಿದ್ದಾರೆ. ಇನ್ನು ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಿಗಲಿದೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು