12:50 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ವತಿಯಿಂದ ಕಥಾ ಸಂಕಲನ ಪ್ರಶಸ್ತಿ ಹಾಗೂ ಕೃತಿ ಬಿಡುಗಡೆ ಸಮಾರಂಭ

10/06/2024, 12:43

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ವತಿಯಿಂದ 2023 ನೇ ಸಾಲಿನ ಡಾ. ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ ಪ್ರಧಾನ ಹಾಗೂ ಒರೆಗಲ್ಲು ಕೃತಿ ಬಿಡುಗಡೆ ಸಮಾರಂಭವನ್ನು ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ಲೇಖಕರಾದ ಪ್ರೊ. ಕಾಳೇಗೌಡ ನಾಗವಾರ ಅವರು ಮತ್ತು ವೇದಿಕೆ ಮೇಲಿನ ಗಣ್ಯರು, ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಇದೇ ಸಂದರ್ಭ ಡಾ. ಬೆಸಗರಹಳ್ಳಿ ರಾಮಣ್ಣ ಅವರು ಎಪ್ಪತ್ತರ ದಶಕದಲ್ಲಿ ಮಂಡ್ಯದ ಕನ್ನಂಬಾಡಿ ಎಂಬ ಪತ್ರಿಕೆಗೆ ಒರೆಗಲ್ಲು ಎಂಬ ಅತ್ಯುತ್ತಮ ಅಂಕಣ ಬರೆಯುತ್ತಿದ್ದರು. ಈಗ ಆ ಎಲ್ಲ ಲೇಖನಗಳನ್ನು ಸೇರಿಸಿ ಒರೆಗಲ್ಲು ಎಂಬ ಕೃತಿ ಹೊರತಂದು ಅದನ್ನು ಬಿಡುಗಡೆ ಮಾಡಲಾಯಿತು.
ಅಲ್ಲದೆ 2023ರ ಅತ್ಯುತ್ತಮ ಕೃತಿ ದಾರಿ ತಪ್ಪಿಸುವ ಗಿಡ ಎಂಬ ಕೃತಿ ಬರೆದ ಲೇಖಕ ಸ್ವಾಮಿ ಪೊನ್ನಾಚಿ ಅವರಿಗೆ ಪ್ರತಿಷ್ಠಾನದ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆ, ಪ್ರಶಸ್ತಿ ಪ್ರದಾನ ಹಾಗೂ ಕೃತಿ ಬಿಡುಗಡೆ ಮಾಡಿದ ಸಾಹಿತಿ ಪ್ರೊ, ಕಾಳೇಗೌಡ ನಾಗವಾರ ಅವರು ಮಾತನಾಡಿ,
70ರ ದಶಕದಲ್ಲಿ ಡಾ. ಬೆಸಗರಹಳ್ಳಿ ರಾಮಣ್ಣ ಅವರು ವೈದ್ಯ ವೃತ್ತಿಯೊಂದಿಗೆ ಸ್ವಾಹಿತ್ಯ ಕ್ಷೇತ್ರದಲ್ಲೂ ಉತ್ತಮ ಕೃಷಿ ಮಾಡಿ ಹಲವಾರು ಉತ್ತಮ ಪುಸ್ತಕಗಳನ್ನು ಬರೆದು ಸಮಾಜದ ಒಳಿತಿಗಾಗಿ ಶ್ರಮಿಸಿ ಮಂಡ್ಯದಲ್ಲಿ ಜನಾನುರಾಗಿಯಾಗಿದ್ದರು ಎಂದು ಅವರ ಜೀವನ ಮತ್ತು ತಮ್ಮ ಒಡನಾಟದ ಬಗ್ಗೆ ತಿಳಿಸಿದರು.
ಡಾ. ಬೆಸಗರಹಳ್ಳಿ ರಾಮಣ್ಣ ಅವರ ಪುತ್ರರು ಐಪಿಎಸ್ ಅಧಿಕಾರಿಗಳೂ, ಸಾಹಿತಿಗಳೂ ಆದ ಬಿ. ಆರ್. ರವಿಕಾಂತೇಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಡಾ. ಬೆಸಗರಹಳ್ಳಿ ರಾಮಣ್ಣ ಅವರ ಕನಸು ಮತ್ತು ಆಶಯಗಳಿಗೆ ಅನುಗುಣವಾಗಿ ಒತ್ತು ನೀಡುವ ಮೂಲಕ 2007ರಲ್ಲಿ ಅವರ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಿ ಸಾಹಿತ್ಯ, ಶಿಕ್ಷಣ, ಕೃಷಿ, ಆರೋಗ್ಯ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸುತ್ತಾ ಬಂದಿದೆ ಎಂದು ಪ್ರತಿಷ್ಠಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾರ್ಯಕ್ರಮದ ಬಗ್ಗೆ ವಿವರಿಸಿ ತಂದೆಯ ಅಗಲಿಕೆಯನ್ನು ನೆನೆದು ಒಂದು ಕ್ಷಣ ಗದ್ಗದಿತರಾದರು.


ಪ್ರತಿಷ್ಠಾನದ ವತಿಯಿಂದ ವೇದಿಕೆ ಮೇಲಿನ ಗಣ್ಯರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಕೃತಿ ಚಿಂತಕರು ಸಂಘಟಕರು ಆದ ಕೋಟಿಗಾನಹಳ್ಳಿ ರಾಮಯ್ಯ, ಖ್ಯಾತ ಲೇಖಕರು ಹಾಗೂ ವಿಮರ್ಶಕರೂ ಆದ ಆರ್. ಸುನಂದಮ್ಮ, ಪ್ರತಿಷ್ಠಾನದ ಅಧ್ಯಕ್ಷರಾದ ಸುಜಾತಾ, ಪ್ರತಿಷ್ಠಾನದ ಅಜೀವ ಸದಸ್ಯರಾದ ಡಿಪಿ ರಾಜಮ್ಮ ರಾಮಣ್ಣ, ಪ್ರಶಸ್ತಿ ಪುರಸ್ಕೃತ ಸ್ವಾಮಿ ಪೊನ್ನಾಚಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು