6:51 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಮಂಗಳೂರಿನ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಆಯ್ಕೆ

10/06/2024, 15:54

ಮಂಗಳೂರು(reporterkarnataka.com): ಭಾರತೀಯ ಪಶುವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್‌ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್‌ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ರೈಸನ್ಸ್ ನ್ಯೂಟ್ರಿಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಂಗಳೂರು ಮೂಲದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅತ್ಯಧಿಕ ಮತಗಳನ್ನು ಗಳಿಸಿ ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಡಾ. ಸುಶಾಂತ್ ರೈ ಅವರು ನಾಲ್ಕು ವರ್ಷಗಳ ಅವಧಿಗೆ ಕೆಪಿಎಫ್‌ಬಿಎ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಕೆವಿಎಎಫ್‌ಎಸ್‌ಯು ಮತ್ತು ಕೆಪಿಎಫ್‌ಬಿಎ ಕುಕ್ಕುಟ ತರಬೇತಿ ಕೇಂದ್ರ ಮತ್ತು ರೋಗನಿರ್ಣಯ ಪ್ರಯೋಗಾಲಯವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕೆಪಿಎಫ್ ಬಿಎ ಅಧಿಕಾರಾವಧಿಯಲ್ಲಿ, ಕುಕ್ಕುಟ ವಿಜ್ಞಾನ ಕ್ಷೇತ್ರದಲ್ಲಿ ಸಹಕಾರಿ ಸಂಶೋಧನೆಗಾಗಿ ಹಲವು ಕ್ರಮ ಕೈಗೊಂಡಿದ್ದರು. ಬೆಂಗಳೂರಿನ ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನ ಪಶುವೈದ್ಯಕೀಯ ಕಾಲೇಜಿನಿಂದ ಪಶು ವೈದ್ಯಕೀಯ ಪದವೀಧರರಾಗಿದ್ದಾರೆ. ಅವರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಕುಕ್ಕುಟ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ರೈತರಿಗೆ ತರಬೇತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು