9:20 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದು ಬೆದರಿಸಿದ ಪ್ರಿಯತಮನ ಭೀಕರ ಕೊಲೆ: ಪ್ರಿಯತಮೆ, ಸಹೋದರ ಬಂಧನ

11/06/2024, 17:15

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪ್ರಿಯತಮನನ್ನು ಪ್ರಿಯತಮೆ ಹಾಗೂ ಆಕೆಯ ಸಹೋದರ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ಮೂಲದ ಹಂಪಾಪುರ ಗ್ರಾಮದ ನಿವಾಸಿ ರಾಜೇಶ್ ಮೃತ ದುರ್ದೈವಿ.
ಈತನ ತಲೆ ಮೇಲೆ ಸೈಜು ಕಲ್ಲು ಎತ್ತಿ ಹಾಕಿ ಕೊಲೆಗೈದ ಪ್ರಿಯತಮೆ ಪ್ರೇಮಾ ಹಾಗೂ ಈಕೆಯ ಸಹೋದರ ಶಿವು ಇದೀಗ ಪೊಲೀಸರ ಅತಿಥಿಗಳಗಿದ್ದಾರೆ.
ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿ ಪ್ರೇಮಾ 15 ವರ್ಷಗಳ ಹಿಂದೆ ನಂಜನಗೂಡಿನ ಶ್ರೀರಾಂಪುರ ನಿವಾಸಿಯನ್ನ ಮದುವೆ ಆಗಿದ್ದಳು. ಒಂದು ತಿಂಗಳ ಹಿಂದೆ ಪ್ರೇಮಾ ಪತಿ ಆತ್ಮಹತ್ಯೆ ಮಾಡಿಕೊಂಡು ತೀರಿಕೊಂಡಿದ್ದರು.
ಪ್ರೇಮಾ ಪತಿಗೆ ರಾಜೇಶ್ ಸ್ನೇಹಿತನಾಗಿದ್ದು ಆಗಾಗ ಮನೆಗೆ ಬಂದು ಪರಿಚಯ ಮಾಡಿಕೊಂಡಿದ್ದ. ಪರಿಚಯದಿಂದ ಸಲುಗೆ ಬೆಳೆದು ಅಕ್ರಮ ಸಂಬಂಧಕ್ಕೆ ತಿರುಗಿತ್ತು.
ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿ ಇಬ್ಬರು ಇದ್ದ ಖಾಸಗಿ ಫೋಟೋ ಹಾಗೂ ಆಡಿಯೋಗಳನ್ನ ವೈರಲ್ ಮಾಡುವುದಾಗಿ ಪ್ರೇಮಾಗೆ ರಾಜೇಶ್ ಬೆದರಿಕೆ ಹಾಕಿದ್ದಾನೆ.
ಇದೇ ವಿಚಾರದಲ್ಲಿ ಮಾತನಾಡಬೇಕೆಂದು ಪ್ರೇಮಾ ನಿನ್ನೆ ರಾತ್ರಿ ರಾಜೇಶ್ ನನ್ನು ಮನೆಗೆ ಕರೆಸಿಕೊಂಡಿದ್ದಾಳೆ.


ಈ ವೇಳೆ ಪ್ರೇಮಾ ಹಾಗೂ ಸಹೋದರ ಶಿವು ಇಬ್ಬರೂ ಸೇರಿ ರಾಜೇಶ್ ವಿರುದ್ದ ತಿರುಗಿಬಿದ್ದಿದ್ದಾರೆ. ಇದರಿಂದ ತನಗೆ ಅಪಾಯ ಎಂದು ತಿಳಿದ ರಾಜೇಶ್ ಇವರಿಂದ ತಪ್ಪಿಸಿಕೊಂಡು ಓಡಿದ್ದಾನೆ. ನಂಜನಗೂಡು ಪಟ್ಟಣದ ಆರ್.ಪಿ.ರಸ್ತೆಯ 8 ನೇ ಕ್ರಾಸ್ ಬಳಿ ಅಡ್ಡಹಾಕಿದ ಪ್ರೇಮಾ ಹಾಗೂ ಶಿವು ಜಗಳವಾಡಿ ರಾಜೇಶ್ ತಲೆ ಮೇಲೆ ಕಲ್ಲು ಚೆಪ್ಪಡಿಯನ್ನ ಎತ್ತಿ ಹಾಕಿ ಭೀಕರವಾಗಿ ಕೊಂದಿದ್ದಾರೆ.
ಅಷ್ಟರಲ್ಲಿ ವಿಷಯ ತಿಳಿದು ನಂಜನಗೂಡು ಟೌನ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಆರೋಪಿ ಪ್ರೇಮ ಹಾಗೂ ಶಿವು ಇಬ್ಬರನ್ನೂ ಬಂಧಿಸಿದ್ದಾರೆ.
ಉಪ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಡಿವೈಎಸ್ಪಿ ರಘು ಮತ್ತು ನಂಜನಗೂಡಿನ ಪೊಲೀಸರು ಸ್ಥಳದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು