7:29 PM Friday4 - April 2025
ಬ್ರೇಕಿಂಗ್ ನ್ಯೂಸ್
Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್‌ ಸೌರ… EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಗೆ ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

19/05/2021, 19:34

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnataka@gmail.com

ಕೋಲಾರದ ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಗೆ ಮುಂದಿನ ದಿನಗಳಲ್ಲಿ ಬೇಕಾಗುವ 1000 ಲೀ . ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ , ಮೆಡಿಸನ್ ಮತ್ತಿತರ ವೈದ್ಯಕೀಯ ಸಲಕರಣೆಗಳನ್ನು ನೀಡುವುದಾಗಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು . 

ಇಂದು ಕೆಜಿಎಫ್ ನ ಬಿಜಿಎಂಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಯನ್ನು ವರ್ಚುವಲ್ ಪ್ಲಾಟ್‌ಫಾರಂ ಮುಖಾಂತರ ಉದ್ಘಾಟಿಸಿದ ಅವರು , ಕೋವಿಡ್ ಸಾಂಕ್ರಾಮಿಕ ರೋಗದ ಅಲೆ ಮುಗಿದ ನಂತರವೂ ಈ ಆಸ್ಪತ್ರೆ ಕಾರ್ಯನಿರ್ವಹಿಸಲಿ ಎಂದು ಹೇಳಿದರು.

ವರ್ಚುಯಲ್ ಉದ್ಘಾಟನೆಯಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ಮತ್ತು ಆರೋಗ್ಯ ಸಚಿವ ಡಾ. ಸುಧಾಕರ್  ಅವರು ಪಾಲ್ಗೊಂಡಿದ್ದರು. ಬಿಜಿಎಂಎಲ್  ಆಸ್ಪತ್ರೆಯಿಂದ

ಸಂಸದ ಎಸ್.ಮುನಿಸ್ವಾಮಿ , ಜಿಲ್ಲಾಧಿಕಾರಿ ಡಾ . ಆರ್.ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್ , ಉಪ ವಿಭಾಗಾಧಿಕಾರಿಗಳಾದ ಸೋಮಶೇಖರ್ , ಕೆ.ಜಿ.ಎಫ್ ತಹಶೀಲ್ದಾರ್‌ ಸುಜಾತ , ಡಿ.ವೈ.ಎಸ್.ಪಿ ಉಮೇಶ್  ಮತ್ತಿತರರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು