4:08 AM Friday27 - September 2024
ಬ್ರೇಕಿಂಗ್ ನ್ಯೂಸ್
ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಮಾಜಿ ಗೃಹ ಸಚಿವ ಆರಗ… ಬಜಾಜ್ ಫಿನ್‍ಸರ್ವ್ ವತಿಯಿಂದ ವಯನಾಡ್ ಭೂಕುಸಿತ ಪರಿಹಾರಕ್ಕೆ 2 ಕೋಟಿ ರೂ. ದೇಣಿಗೆ ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು! ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ… ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ… ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಲಿ: ಶಾಸಕ ಡಾ.ಭರತ್ ಶೆಟ್ಟಿ… ನ್ಯಾಯಾಲಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ ಕೆಎಸ್ಸಾರ್ಟಿಸಿ: ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ ಪ್ಯಾಕೇಜ್

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲೆಯಲ್ಲೂ ಕಾಡಾನೆ ಕಾಟ ಶುರು: ಹೆಬ್ರಿ, ಸೋಮೇಶ್ವರ ಪ್ರದೇಶದಲ್ಲಿ ಒಂಟಿ ಸಲಗದ ದಾಂಧಲೆ; ಪ್ರವಾಸಿಗರೇ ಹುಷಾರ್!

13/06/2024, 12:54

ಕಾರ್ಕಳ(reporterkarnataka.com): ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಸೀಮಿತವಾಗಿದ್ದ ಕಾಡಾನೆ ಹಾವಳಿ ಈಗ ಉಡುಪಿ ಜಿಲ್ಲೆಯಲ್ಲಿಯೂ ಸದ್ದಿಲ್ಲದೆ ಆರಂಭವಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.


ಕಾರ್ಕಳ ತಾಲೂಕಿನ ಹೆಬ್ರಿ, ಸೋಮೇಶ್ವರ, ನಾಡ್ಪಾಲು ಕೂಡ್ಲು, ಆಗುಂಬೆ ಮಾರ್ಗವಾಗಿ ಸಾಗುವವರು ಹುಷಾರ್ ಆಗಿ ಸಂಚರಿಸುವ ಪರಿಸ್ಥಿತಿ ಏರ್ಪಟ್ಟಿದೆ. ಯಾಕೆಂದರೆ ಒಂಟಿ ಸಲಗವೊಂದು ಹೆಬ್ರಿ, ಆಗುಂಬೆ ವ್ಯಾಪ್ತಿಯ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿರುವುದು ಸ್ಥಳೀಯರಿಗೆ ಹಾಗೂ ರಸ್ತೆಯಲ್ಲಿ ಸಾಗುವ ಜನರ ನಿದ್ದೆಗೆಡಿಸಿದೆ.
ಕಳೆದ ನಾಲ್ಕು ದಿನಗಳಿಂದ ಹೆಬ್ರಿ ತಾಲೂಕಿನ ನಾಡ್ಪಾಲು ನೆಲ್ಲಿಕಟ್ಟೆ ಮೀನಾ ಪೂಜಾರ್ತಿ ಎಂಬವರ ಮನೆ ಬಳಿ ಆನೆ ರಾತ್ರಿ ವೇಳೆಯಲ್ಲಿ ದಾಳಿ‌ಮಾಡುತ್ತಿದ್ದು ಮರದಲ್ಲಿದ್ದ ಹಲಸು ಹಾಗೂ ತೆಂಗು ಬಾಳೆ, ನಾಶಮಾಡಿದೆ. ಆದರೆ ಮುಂಜಾವಿನಲ್ಲಿ‌ ಆನೆ ಕಾಡಿಗೆ ಹೋಗಿ ತಪ್ಪಿಸಿಕೊಳ್ಳುತ್ತಿದೆ. ಯಾವುದೇ ಜೀವ ಹಾನಿ ಸಂಭವಿಸಿಲ್ಲ.
ಕಳೆದ ಬಾರಿ ಕಬ್ಬಿನಾಲೆ, ಮುಂಡಾಣಿ, ತಿಂಗಾಳೆ ಬಳಿ ಇದೆ ಆನೆಯು ಅಲ್ಪ‌ಮಟ್ಟಿಗೆ ಕೃಷಿ ಯನ್ನು ಹಾನಿಗೊಳಿಸಿತ್ತು. ಅರಣ್ಯ ಇಲಾಖೆಯ ಮಾಹಿತಿ ಪ್ರಕಾರ ಈ ಒಂಟಿ ಸಲಗವು ಸುಳ್ಯದ ಕುಕ್ಕೆ ಸುಬ್ರಹ್ಮಣ್ಯ ದಿಂದ ಬೆಳ್ತಂಗಡಿ ಮೂಲಕ ನಾರಾವಿ, ಮಾಳ ಘಾಟ್ ಮೂಲಕ ವಾಲಿಕುಂಜ ಬೆಟ್ಟದ ಮೇಲಿನ ಕಬ್ಬಿನಾಲೆಯ ತಿಂಗಳಮಕ್ಕಿ , ತೆಂಗುಮಾರ್, ಕಿಗ್ಗ , ಬರ್ಕಣ, ಮಲ್ಲಂದೂರು , ಆಗುಂಬೆಯ ಮೂಲಕ ನಗರ ಹೊಸನಗರ ವರೆಗೆ ಸಂಚರಿಸುತ್ತದೆ. ಆದರೆ ಯಾವುದೇ ಪ್ರಾಣ ಹಾನಿ ಮಾಡಿಲ್ಲ.
ಕಳೆದ ಇಪ್ಪತ್ತು ವರ್ಷಗಳ ಹಿಂದೆ ಹೆಬ್ರಿ ಸಮೀಪದ ಸಂತೆಕಟ್ಟೆ ಎಂಬಲ್ಲಿ ಒಂಟಿ‌ ಸಲಗವು ಕೋಲಿನ‌ ಮೂಲಕ ಹೊಡೆಯಲು ಹೋದ ಓರ್ವ ವ್ಯಕ್ತಿಯನ್ನು ಸೊಂಡಿಲಿನ ಮ‌ೂಲಕ ನೆಲಕ್ಕೆ ಬಿಸಾಡಿತ್ತು.
*ಪ್ರವಾಸಿಗರೆ ಹುಷಾರು:* ಕಬ್ಬಿನಾಲೆ ಫಾಲ್ಸ್ ಅಗುಂಬೆ ಸೂರ್ಯಾಸ್ತ ವೀಕ್ಷಣಾ ಪ್ರದೇಶದ, ಮಲ್ಲಂದೂರು ಬರ್ಕಣ ಫಾಲ್ಸ್ ಗಳಿಗೆ ಬರುವ ಪ್ರವಾಸಿಗರೆ ಹುಷಾರಾಗಿರಿ. ಒಂಟಿ‌ ಸಲಗವು ಅಲ್ಲಲ್ಲಿ ಕಾಣಿಸುತ್ತಿದೆ. ಅರಣ್ಯ ಇಲಾಖೆಯ ಮಾಹಿತಿಯನ್ನು ಆಧರಿಸಿ ಸಂಚರಿಸುವುದು ಒಳಿತು. ಅರಣ್ಯ ಇಲಾಖೆ ಸಹಕಾರ ಪಡೆದುಕೊಳ್ಳಿ.

ಇತ್ತೀಚಿನ ಸುದ್ದಿ

ಜಾಹೀರಾತು