3:50 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಡ್ಯದಲ್ಲಿ ಮನೆ ಮನೆಗೆ ಕುಡಿಯುವ ನೀರು ಕುಮಾರಸ್ವಾಮಿ ಕನಸು: ಶಾಸಕ ಸುರೇಶ್ ಗೌಡ

20/08/2021, 09:30

ಜಗದೀಶ್ ದೇವಲಾಪುರ ಮಂಡ್ಯ

info.reporterkarnataka@gmail.com

ಮನೆಮನೆಗೆ ಕುಡಿಯುವ ನೀರಿನ ಯೋಜನೆಯನ್ನು ಮಾಜಿ ಪ್ರಧಾನಿ ದೇವೇಗೌಡರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಚಾಲನೆಗೆ ನೀಡುವ ಮುಖಾಂತರ ಮಂಡ್ಯ ಜಿಲ್ಲೆಗೆ ಪ್ರಥಮ ಆದ್ಯತೆ ನೀಡಿದ ಕೊಡುಗೆ ಇದಾಗಿದೆ ಎಂದು ಶಾಸಕ ಸುರೇಶ್ ಗೌಡ ಹೇಳಿದರು.

ನಾಗಮಂಗಲ ತಾಲೂಕಿನ ದೇವಲಾಪುರ ಹೋಬಳಿಯ ದೇವರಮಾದಹಳ್ಳಿ ಗ್ರಾಮದಲ್ಲಿ ನಂಜಮ್ಮ ಹಾಗೂ ನರಸಿಂಹಯ್ಯನವರ ಸ್ಮರಣಾರ್ಥ ಅವರ ಹೆಸರಿನಲ್ಲಿ ನೂತನವಾಗಿ ಶುದ್ಧ ನೀರು ಘಟಕವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಪ್ರಸ್ತುತ ಪ್ರತಿ ಮನೆ ಮನೆಗೂ ಕುಡಿಯುವ ನೀರಿನ ಯೋಜನೆಯನ್ನು ದೇವೇಗೌಡರು ಮಾರ್ಗದರ್ಶನದೊಂದಿಗೆ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿ ಚಾಲನೆ ನೀಡಿದ್ದು, ಮಂಡ್ಯ ಜಿಲ್ಲೆಗೆ ಪ್ರಥಮ ಆದ್ಯತೆ ನೀಡುವ ಮುಖಾಂತರ ಯೋಜನೆಗೆ ಚಾಲನೆ ದೊರೆತಿದೆ. ಇದರಿಂದ ಪ್ರತಿಯೊಬ್ಬರ ಕುಡಿಯುವ ನೀರಿನ ಯೋಜನೆ ಸಾಕಾರಗೊಳ್ಳುವುದು ಎಂದು ತಿಳಿಸಿದರು.

ನನ್ನ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಆಗುವ ಕೆಲಸಗಳು ಸಾಗುತ್ತಿದ್ದು ಪೂರ್ಣಪ್ರಮಾಣದಲ್ಲಿ ಆಗಿದೆ ಎಂದು ಹೇಳುವುದಿಲ್ಲ. ಆಗಬೇಕಾದ ಕೆಲಸಗಳು ಹಂತಹಂತವಾಗಿ ಮಾಡುವ ಭರವಸೆ ನೀಡುತ್ತಾ ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷದ ಅನಿವಾರ್ಯತೆ ವಾಗಿದ್ದು ತಮಗೆಲ್ಲ ಗೊತ್ತಿರುವ ವಿಚಾರವಾಗಿದೆ. ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಸರ್ಕಾರದ ಯೋಜನೆಗಳನ್ನು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಂಚಾಯಿತಿ ಅಧಿಕಾರಿಗಳು ಸಾರ್ವಜನಿಕರಿಗೆ ಸವಲತ್ತುಗಳ ಸಿಗುವ ಯೋಜನೆಯ ಬಗ್ಗೆ ಸದುಪಯೋಗಪಡಿಸಿಕೊಳ್ಳುವಂತೆ ಜನರಿಗೆ ಮುಟ್ಟುವಂತೆ  ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರತಿಯೊಬ್ಬರು ಬದ್ಧವಾಗಿರಬೇಕು ಎಂದು ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ
ಅಪ್ಪಾಜಿಗೌಡ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಮಂಡ್ಯ  ಹಾಲು ಒಕ್ಕೂಟದ ನಿರ್ದೇಶಕರಾದ ಕೋಟಿ ರವಿ, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಯೋಗೇಶ್, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ನರಸಿಂಹಮೂರ್ತಿ, ಸಿ.ಜೆ ಕುಮಾರ್ ಮಾತನಾಡಿದರು.

ಇದೇ ವೇಳೆಯಲ್ಲಿ ನೂತನ ನೀರಿನ ಘಟಕದ ಪ್ರಾಯೋಜಕರಾದ ರಾಜಣ್ಣ, ಗ್ರಾಮ ಪಂಚಾಯಿತಿ ಸದಸ್ಯರಾದ ಸುರೇಶ್ ಸವಿತಾ ಬಸವರಾಜು, ದೇವರಾಜು. ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಿತೀಶ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು