2:30 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಉರ್ವಸ್ಟೋರ್: ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

15/06/2024, 11:24

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೊಟ್ಟಾರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವನ್ನು ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿಯ ಪ್ರಗತಿ ಮಹಿಳಾ ಮಂಡಲದಲ್ಲಿ ಜೂನ್ 16ರಂದು ಪೂರ್ವಾಹ್ನ ಸಮಯ 9.30 ರಿಂದ ಅಪರಾಹ್ನ 12.30ರವರೆಗೆ ಆಯೋಜಿಸಲಾಗಿದೆ.
ಈ ಶಿಬಿರಕ್ಕೆ ಯುವವಾಹಿನಿ ಮಂಗಳೂರು ಘಟಕ, ಯುವವಾಹಿನಿ ಮಂಗಳೂರು ಮಹಿಳಾ ಘಟಕ , ಪ್ರಗತಿ ಮಹಿಳಾ ಮಂಡಲ ಉರ್ವಸ್ಟೋರ್ ಹಾಗೂ ಬ್ರಹ್ಮ ಕುಮಾರೀಸ್ ಮಂಗಳೂರು‌ ಸಾಥ್ ನೀಡಲಿದ್ದಾರೆ. ವೈದ್ಯಕೀಯ ಶಿಬಿರದಲ್ಲಿ ಅತ್ತಾವರ ಕೆಎಂಸಿ ಆಸ್ಪತ್ರೆಯ ನುರಿತ ವೈದ್ಯರ ತಂಡದಿಂದ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಬಿಪಿ ಮತ್ತು ಮಧುಮೇಹ ತಪಾಸಣೆ, ಉಚಿತ ಔಷಧಿ ವಿತರಣೆ, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳ ಕಣ್ಣಿನ ರೋಗಿಗಳಿಗೆ ಸಂಘದ ವತಿಯಿಂದ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು