2:28 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ನಿರ್ವಹಣೆಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ

16/06/2024, 12:59

ಮಂಗಳೂರು(reporterkarnataka.com): ಬೆಳ್ತಂಗಡಿ ತಾಲೂಕು ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗಿನ ಎನ್.ಹೆಚ್. 73 ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಪರಿಶೀಲನೆ ಮತ್ತು ಮಳೆಗಾಲದ ಸಮಯ ಉಂಟಾಗುವ ತೊಂದರೆಗಳ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ವೀಕ್ಷಣೆ ನಡೆಸಿ, ಕೂಡಲೇ ಸಮಸ್ಯೆಗಳ ಪರಿಹಾರಕ್ಕೆ ಸೂಚಿಸಿದ್ದರು.


ಅದರಂತೆ ವಿವಿಧ 21 ಕಡೆಗಳಲ್ಲಿ ಸೂಕ್ತವಾದ ದುರಸ್ತಿ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ನಿವ೯ಹಿಸಿದೆ.
ರಸ್ತೆ ಬದಿಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಚರಂಡಿಗಳನ್ನು ನಿರ್ಮಿಸಲಾಗಿದ್ದು, ರಸ್ತೆ ಸಂಚಾರ ಸುಗಮವಾಗುವಂತೆ ಹಾಗೂ ಶಾಲಾ ವಠಾರ, ಬಸ್ಸು ನಿಲ್ದಾಣಗಳ ಬಳಿ ಕೆಸರು ನಿಲ್ಲದಂತೆ ಕ್ರಮವಹಿಸಲಾಗಿದೆ.
ಈ ಹೆದ್ದಾರಿ ಕಾಮಗಾರಿಗಳ ನಿರ್ವಹಣೆ ಬಗ್ಗೆ ಸಾರ್ವಜನಿಕರು ಇನ್ನೂ ಯಾವುದೇ ಸಮಸ್ಯೆಗಳು ಎದುರಿಸುತ್ತಿದ್ದರೆ ಅಥವಾ ಸಂಚಾರದಲ್ಲಿ ಸಮಸ್ಯೆ ಉಂಟಾಗುತ್ತಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಕಂಟ್ರೋಲ್ ರೂಂ ಸಂಖ್ಯೆ: 0824-2220588 ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು