2:08 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ನಾಳೆ ಬೃಹತ್ ವಾಹನ ಜಾಥಾ; ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿಜಯೋತ್ಸವ

16/06/2024, 21:24

ಮಂಗಳೂರು(reporterkarnataka.com): ದಕ್ಷಿಣ ಕನ್ನಡದ ಸಂಸದರಾಗಿ ಅಭೂತಪೂರ್ವ ಜಯ ದಾಖಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಅಭಿನಂದನೆ ಹಾಗೂ ಕಾರ್ಯಕರ್ತರ ವಿಜಯೋತ್ಸವ ಕಾರ್ಯಕ್ರಮ ಜೂನ್ 17ರಂದು ಸಂಜೆ 4.30ಕ್ಕೆ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಇದೇ ಸಂದರ್ಭದಲ್ಲಿ ಉಡುಪಿ ಚಿಕ್ಕಮಂಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಚುನಾಯಿತರಾದ ಡಾ| ಧನಂಜಯ ಸರ್ಜಿ, ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ವಿಧಾನ ಪರಿಷತ್ತಿಗೆ ಚುನಾಯಿತರಾದ ಎಸ್. ಎಲ್. ಭೋಜೇಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಬಂಧುಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.
ಅಭಿನಂದನ ಸಮಾರಂಭಕ್ಕೆ ಮುನ್ನ ಸಂಜೆ 3.30ಕ್ಕೆ ನಗರದ ಬಂಟ್ಸ್ ಹಾಸ್ಟೆಲ್ ವೃತ್ತದಿಂದ ಪುರಭವನದ ತನಕ ಬೃಹತ್ ವಾಹನ ಜಾಥಾ ನಡೆಯಲಿದ್ದು ವಿಜಯೋತ್ಸವ ಕಾರ್ಯಕ್ರಮ ಇನ್ನಷ್ಟು ಮೆರುಗನ್ನು ನೀಡಲಿದೆ.
ಈ ವಿಜಯೋತ್ಸವದ ಅಭಿನಂದನಾ ಸಮಾರಂಭ ಮತ್ತು ವಾಹನ ಜಾಥದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬಿಜೆಪಿ ಜಿಲ್ಲಾ ಸಮಿತಿಯು ಪ್ರಕಟಣೆಯ ಮೂಲಕ ವಿನಂತಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು