2:09 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಜ್ಯುವೆಲ್ಸ್‌ನಲ್ಲಿ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರನೀಗೆ ಅಭಿನಂದನಾ ಕಾರ್ಯಕ್ರಮ

18/06/2024, 16:03

ಪುತ್ತೂರು(reporterkarnataka.com): ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಸಾಮಥ್ಯವನ್ನು ಹೊಂದಿದ್ದಾನೆ ಎಂದು ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಹೇಳಿದರು.
ಪುತ್ತೂರು ಮುಳಿಯ ಜ್ಯುವೆಲ್ಸ್ ನ ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸನ್ಮಾನ ಸ್ವೀಕರಿಸಿದ ಅಗ್ನಿವೀರ ಭವಿಶ್ ತಾರಿಗುಡ್ಡೆ ಮಾತನಾಡಿ, ಸೇನೆಯಲ್ಲಿ ದೇಶ ಸೇವೆಯನ್ನು ಮಾಡಬೇಕೆಂಬ ಕನಸು ಸಣ್ಣದರಲ್ಲೇ ಇತ್ತು. ಆರ್ಥಿಕ ಕಷ್ಟ ಇದ್ದ ಕಾರಣದಿಂದ ಬೆಳಗ್ಗಿನ ಜಾವ ತರಬೇತಿಯಲ್ಲಿ ಭಾಗವಹಿಸಿ, ಕಾಲೇಜು ಶಿಕ್ಷಣವನ್ನು ಪಡೆದು ರಾತ್ರಿ ಬಾರ್ ನಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದೆ. ಈಗ ಸೇನೆಯಲ್ಲಿ ಅವಕಾಶ ಸಿಕ್ಕಿದ್ದು, ಅದನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುವ ಜವಾಬ್ದಾರಿ ಇದೆ ಎಂದು ತಿಳಿಸಿದರು.
ಅಗ್ನಿವೀರನಾಗಿ ಆಯ್ಕೆಯಾದ ಭವಿಶ್ ತಾರಿಗುಡ್ಡೆ ಅವರನ್ನು ಧನ ಸಹಾಯ ನೀಡಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
3 ಸಾವಿರಕ್ಕೂ ಅಧಿಕ ಗಿಡಗಳನ್ನು ವಿತರಣೆ ಮಾಡುವ ಜತೆಗೆ ಗೋವಿಹಾರ ದಾಮದಲ್ಲಿ ಗಿಡಗಳನ್ನು ಸಿಬ್ಬಂದಿಗಳಲ್ಲಿ ನೆಡಿಸುವ ಮೂಲಕ ಪರಿಸರ ಕಾಳಜಿಯನ್ನು ತೋರಿಸಿದೆ. ವಿವಿಧ ಸಾಮಾಜಿಕ ಚಟುವಣೆಯಲ್ಲಿ ಮುಂಚೂಣಿಯಲ್ಲಿರುವ ಪರಿಶುದ್ಧವಾದ ಚಿನ್ನಾಭರಣಕ್ಕೆ ಹೆಸರುವಾಸಿಯಾಗಿರುವ ಮುಳಿಯ ಜ್ಯುವೆಲ್ಸ್ ಈಗ ಅಗ್ನಿಮೀರನಾಗಿ ಆಯ್ಕೆಯಾದವರನ್ನು ಗೌರವಿಸುವ ಮೂಲಕ ಇನ್ನಷ್ಟು ಮಂದಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ಕೆ ಮುಂದಾಗಿದೆ.
ತಾಯಿ ವೀಣಾ, ತಂದೆ ಬಾಲಕೃಷ್ಣ, ಸಹೋದರಿ ಭವಿತಾ, ಪುತ್ತೂರು ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್, ಪ್ಲೋರ್ ಮೆನೇಜರ್ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು