5:55 AM Saturday28 - September 2024
ಬ್ರೇಕಿಂಗ್ ನ್ಯೂಸ್
ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಮಾಜಿ ಗೃಹ ಸಚಿವ ಆರಗ… ಬಜಾಜ್ ಫಿನ್‍ಸರ್ವ್ ವತಿಯಿಂದ ವಯನಾಡ್ ಭೂಕುಸಿತ ಪರಿಹಾರಕ್ಕೆ 2 ಕೋಟಿ ರೂ. ದೇಣಿಗೆ ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು! ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ… ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ… ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಲಿ: ಶಾಸಕ ಡಾ.ಭರತ್ ಶೆಟ್ಟಿ… ನ್ಯಾಯಾಲಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ ಕೆಎಸ್ಸಾರ್ಟಿಸಿ: ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ ಪ್ಯಾಕೇಜ್

ಇತ್ತೀಚಿನ ಸುದ್ದಿ

ಗ್ಯಾರಂಟಿಗೆ 60 ಸಾವಿರ ಕೋಟಿ ; ಇಂಧನ ತೆರಿಗೆ ಹೆಚ್ಚಳದಿಂದ ಬರುವುದು ಬರೇ 3 ಸಾವಿರ ಕೋಟಿ; ಪ್ರತಿಪಕ್ಷದ ನಾಯಕರಿಗೆ ಇದೆಲ್ಲ ಅರ್ಥ ಆಗೋಲ್ಲ: ಸಿಎಂ

19/06/2024, 13:39

ಬೆಂಗಳೂರು(reporterkarnataka.com): ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು 60 ಸಾವಿರ ಕೋಟಿ ರೂಪಾಯಿ ವ್ಯಯಿಸುತ್ತಿದ್ದೇವೆ. ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ಮಾತುಗಳಿಗೆ ಅರ್ಥವಿಲ್ಲ. ಇದೆಲ್ಲಾ ಅವರಿಗೆ ಅರ್ಥ ಆಗುವುದೂ ಇಲ್ಲ , ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ಅವರಿಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಮುಖ್ಯಮಂತ್ರಿ ಅವರು ಈ ಕುರಿತು ಬರೆದಿದ್ದಾರೆ.
ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಜನರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲ ಕ್ರೋಢೀಕರಣದ ಉದ್ದೇಶದೊಂದಿಗೆ ಪೆಟ್ರೋಲ್‌, ಡೀಸೆಲ್‌ ಮಾರಾಟ ತೆರಿಗೆಯಲ್ಲಿ 3 ರೂ. ಗಳಷ್ಟು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು