3:22 AM Wednesday9 - April 2025
ಬ್ರೇಕಿಂಗ್ ನ್ಯೂಸ್
ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್…

ಇತ್ತೀಚಿನ ಸುದ್ದಿ

ಪಳ್ಳಿ: ಯಕ್ಷಧ್ರುವ ಯಕ್ಷ ಶಿಕ್ಷಣದಿಂದ ಉಚಿತ ಯಕ್ಷಗಾನ ನಾಟ್ಯ ತರಬೇತಿಗೆ ಚಾಲನೆ

19/06/2024, 19:07

ಕಾರ್ಕಳ(:reporterjarnataka.com): ಕರಾವಳಿಯ ಮೇರು ಕಲೆಯಾದ ಯಕ್ಷಗಾನವನ್ನು ಉಳಿಸಿ ಬೆಳೆಸುವ ಪ್ರಯತ್ನವನ್ನು ಪ್ರತಿಯೊಬ್ಬರೂ ಮಾಡಬೇಕು. ಇದರೊಂದಿಗೆ ನಮ್ಮ ಸಂಸ್ಕೃತಿ, ಪರಂಪರೆಗೆ ಯಾವುದೇ ಧಕ್ಕೆಯಾಗದಂತೆ ಎಚ್ಚರವಹಿಸಬೇಕಾದ್ದು ಅತ್ಯವಶ್ಯಕ ಎಂದು ಯಕ್ಷಗಾನ ಪಂಚಮೇಳಗಳ ಯಜಮಾನ ಪಳ್ಳಿ ಕಿಶನ್ ಹೆಗ್ಡೆ ಹೇಳಿದರು.


ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಪಳ್ಳಿ ನಿಂಜೂರು ಘಟಕದ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣದ ಅಂಗವಾಗಿ ಪಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಉಚಿತ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
ಯಕ್ಷಗಾನ ಪರಂಪರೆ ನಿರಂತರ ಮುಂದುವರಿಯಬೇಕು. ವಿದ್ಯಾರ್ಥಿಗಳು ತಮ್ಮ ಕಲಿಕೆಯ ಜೊತೆ ಜೊತೆಗೆ ಯಕ್ಷಗಾನ ಕಲಿಕೆಯಲ್ಲಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲೂ ಮಕ್ಕಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಇದರಿಂದ ವ್ಯಕ್ತಿತ್ವ ವಿಕಸನವೂ ಸಾಧ್ಯ. ಶಿಕ್ಷಣದೊಂದಿಗೆ ಮಕ್ಕಳಲ್ಲಿ ಜೀವನ ಮೌಲ್ಯಗಳನ್ನು ಬೆಳೆಸುವ ಕಾರ್ಯವನ್ನು ಹೆತ್ತವರು ಮತ್ತು ಶಿಕ್ಷಕರು ಮಾಡಬೇಕು ಎಂದು ಕಿಶನ್ ಹೆಗ್ಡೆ ಹೇಳಿದರು.
ವೇದಿಕೆಯಲ್ಲಿ ಪಳ್ಳಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಜಗದೀಶ್ ಹೆಗ್ಡೆ ಪೆಜಕೊಡಂಗೆ, ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಅಂಚನ್, ಯಕ್ಷ ಗುರುಗಳಾದ ಮಹಾವೀರ್ ಪಾಂಡಿ, ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಪ್ರಭಾಕರ್ ಬಂಗೇರ, ಪಟ್ಲ ಫೌಂಡೇಶನ್ ಪಳ್ಳಿ ನಿಂಜೂರು ಘಟಕದ ಅಧ್ಯಕ್ಷರು ಸುನಿಲ್ ಬಿ ಶೆಟ್ಟಿ, ಗ್ರಾ.ಪಂ. ಸದಸ್ಯ ಶ್ರೀಕಾಂತ್ ಪ್ರಭು, ಪ್ರಮುಖರಾದ ಮನೋಹರ್ ಶೆಟ್ಟಿ, ವಿಜಯ ಎಂ. ಶೆಟ್ಟಿ, ರಘುನಾಥ್ ಶೆಟ್ಟಿ, ಜಯರಾಮ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಕಾಂತೇಶ್ ಶೆಟ್ಟಿ ಮತ್ತು ಪಟ್ಲ ಫೌಂಡೇಶನ್ ಟ್ರಸ್ಟ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ನಾಗರತ್ನ ಸ್ವಾಗತಿಸಿದರು. ಶಿಕ್ಷಕಿ ಲಕ್ಷ್ಮೀ ವಂದಿಸಿದರು. ಶಿಕ್ಷಕಿ ಚಿತ್ರ ವಿನಯ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು