10:57 AM Monday23 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ಜಿಟಿ ಜಿಟಿ ಮಳೆ ಲೆಕ್ಕಿಸದೆ ಎತ್ತಿನಗಾಡಿ ಏರಿದ ಮಾಜಿ ಶಾಸಕ: ನಂಜನಗೂಡಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ಖಂಡಿಸಿ ಬೃಹತ್ ಪ್ರತಿಭಟನೆ

21/06/2024, 19:01

*ಕರ್ನಾಟಕ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ ಮಾಜಿ ಶಾಸಕ ಹರ್ಷವರ್ಧನ್*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಂಜನಗೂಡಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಎತ್ತಿನಗಾಡಿ ಏರಿ ಪ್ರತಿಭಟನೆ ನಡೆಸಿದರು.
ಹುಲ್ಲಹಳ್ಳಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಎತ್ತಿನಗಾಡಿ ಏರಿ, ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಹರ್ಷವರ್ಧನ್ ಮಾತನಾಡಿ, ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದ ಪರಿಣಾಮ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗಿದೆ. ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಕುಗ್ಗಿದೆ. 53 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲಾಗುತ್ತಿದೆ. ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ಹಗರಣ ಮಾಡಲಾಗಿದೆ. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನಿಲ್ಲಿಸಲಾಗಿದೆ. ಇದು ದಲಿತ ವಿರೋಧಿ ಸರ್ಕಾರವಾಗಿದೆ. ಎಸ್ಸಿ,ಎಸ್‌ಟಿ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ ಎಂದು ಕಿಡಿಕಾರಿದರು.


ಬಡವರಿಗೆ ಮತ್ತು ಮಧ್ಯಮ ವರ್ಗದ ಜನರಿಗೆ ದೊಡ್ಡ ಹೊರೆಯಾಗುತ್ತಿದೆ. ನಿದ್ರೆ ಮಾಡುತ್ತಿರುವ ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಬೆಲೆ ಏರಿಕೆಯನ್ನು ಮುಖ್ಯಮಂತ್ರಿಗಳು ವಾಪಸ್ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿ ತಹಸೀಸಿಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಹಾಗೂ ಮಾಜಿ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ಮಹದೇವಯ್ಯ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆಂಡಗಣ್ಣಪ್ಪ, ಪಟ್ಟಣ ಬಿಜೆಪಿ ಅಧ್ಯಕ್ಷ ಸಿದ್ದರಾಜು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಎಂ.ಸಿ. ಬಸವಣ್ಣ, ಬಾಲ ಚಂದ್ರು,ಮಾಜಿ ತಾಪಂ ಸದಸ್ಯ ಬದನವಾಳು ರಾಮು, ಯುವ ಮೋರ್ಚಾ ಅಧ್ಯಕ್ಷ ಗೋವರ್ಧನ್ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು