11:20 PM Saturday11 - January 2025
ಬ್ರೇಕಿಂಗ್ ನ್ಯೂಸ್
ರಾಷ್ಟ್ರೀಯ ಜಲಮಾರ್ಗಗಳ ಪ್ರಮುಖ ಮೂಲಸೌಕರ್ಯ ನವೀಕರಣಕ್ಕೆ 5 ವರ್ಷಗಳಲ್ಲಿ 50,000 ಕೋಟಿ ಹೂಡಿಕೆ… ರಾಜ್ಯವನ್ನು “ಕೌಶಲ್ಯ ಅಭಿವೃದ್ಧಿ ಹಬ್‌” ಮಾಡುವುದೇ ನಮ್ಮ ಸರ್ಕಾರದ ಗುರಿ!;ಜಿಟಿಟಿಸಿ ಕೈಗಾರಿಕೆ-ಶೈಕ್ಷಣಿಕ ಸಮಾವೇಶದಲ್ಲಿ… ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ ಅವರಿಗೆ ಸಿದ್ಧಗಂಗಾ ರಾಷ್ಟ್ರೀಯ ರತ್ನ ಪ್ರಶಸ್ತಿ ಪ್ರದಾನ

22/06/2024, 21:29

ಬೆಂಗಳೂರು(reporterkarnataka.com): ಬೆಂಗಳೂರಿನ ಬಸವಶ್ರೀ ಫೌಂಡೇಶನ್ ವತಿಯಿಂದ ಭಗವಾನ್ ಬುದ್ದ, ಶ್ರೀ ಬಸವೇಶ್ವರ, ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ ಪ್ರಯುಕ್ತ ಮಹಾಸಂಗಮ ಸಮಾವೇಶ, ಶಾಸಕರ ಜನಸ್ಪಂದನ ಪತ್ರಿಕೆಯ 15ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆಯ ಬಿಡುಗಡೆ ಸಮಾರಂಭ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿಯ ಕನ್ನಡದ ನ್ಯಾಯವಾದಿಗಳಾದ ಕೆ . ಎಲ್. ಕುಂದರಗಿ ಅವರು ವಹಿಸಿದ್ದರು.ಸಮಾರಂಭದಲ್ಲಿ ವಿಶೇಷ ಸೇವೆ ಸಲ್ಲಿಸಿದ ಗಣ್ಯರಿಗೆ “ ಸಿದ್ಧಗಂಗಾ ರಾಷ್ಟ್ರೀಯ ರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ತುಮಕೂರು ಜಿಲ್ಲೆಯ ಶ್ರೀ ಅರೇ ಶಂಕರ ಮಠದ ಶ್ರೀ ಸಿದ್ದರಾಮ ಚೈತನ್ಯ ಮಹಾ ಸ್ವಾಮಿಗಳು ಹಾಗೂ ತುಮಕೂರು ಜಿಲ್ಲೆಯ ಶ್ರೀ ಬಸವೇಶ್ವರ ಪ್ರಾಚಿ ಯೋಗ ಮಠದ ಶ್ರೀ ತೋಟಾಪುರಿ ಸೋಮಶೇಖರ್ ಗುರೂಜಿಯವರ ಗೌರವ ಉಪಸ್ಥಿತಿಯಲ್ಲಿ ಕರ್ನಾಟಕ ಸರ್ಕಾರದ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಪಿ. ಕೃಷ್ಣಭಟ್ ಅವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರಿಗೆ “ ಸಿದ್ಧಗಂಗಾ ರಾಷ್ಟ್ರೀಯ ರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಕನ್ಸಲ್‌ಟಂಟ್ ಫ್ರೋಟೋಕಾಲ್ ಉಚ್ಚ ನ್ಯಾಯಾಲಯದ ಜಂಟಿ ರಿಜಿಸ್ಟ್ರಾರ್ ಟಿ. ಎನ್. ಕನಕರಾಜು, ಲೇಖಕರಾದ ಎಲ್. ಎನ್.ಮುಕುಂದರಾಜ, ಟಿಲಿಕಾಂ ಎಂಪ್ಲಾಯೀಸ್ ಕೋ- ಆಪರೇಟಿವ್ ಹೌಸಿಂಗ್ ಸೊಸೈಟಿ (ಲಿ.) ನ ಅಧ್ಯಕ್ಷರಾದ ಬಿ. ಬಾಬು, ಬಿಜೆಪಿ ರಾಜ್ಯ ನೇಕಾರ ವಿಭಾಗದ ರಾಜ್ಯ ಸಮಿತಿ ಸದಸ್ಯರಾದ ಬಿ. ಎಲ್. ಹರೀಶ್‌ ಕುಮಾರ್‌, ಸಾಹಿತಿ ಹಾಗೂ ಪತ್ರಕರ್ತರಾದ ಸಂಗಮೇಶ ಎನ್. ಜವಾದಿ, ಧನ್ವಂತರಿ ಸೇವಾ ಸಂಸ್ಥೆಯ ಅಧ್ಯಕ್ಷ ಡಾ. ಸುರೇಶ್ ಮೆಣಸಗಿ, ಧನ್ವಂತರಿ ಸೇವಾ ಸಂಸ್ಥೆಯ ಅಧ್ಯಕ್ಷ ಡಾ. ಸುರೇಶ್ ಮೆಣಸಗಿ ಮುಂತಾದವರು ಉಪಸ್ಥಿತರಿದ್ದರು.
ಬಸವಶ್ರೀ ಫೌಂಡೇಶನ್‌ನ ಅಧ್ಯಕ್ಷ ಎಚ್ . ಸದಾಶಿವ ಸ್ವಾಗತಿಸಿದರು. ಚಂದನ ವಾಹಿನಿಯ ನಿರೂಪಕರಾದ ಸವಿ ಪ್ರಕಾಶ್‌ ಕಾರ್ಯಕ್ರಮ ನಿರೂಪಿಸಿದರು.
*ಚಿತ್ತರಂಜನ್ ಬೋಳಾರ್:*
ಸಹಕಾರ ಕ್ಷೇತ್ರದ ಜೊತೆಗೆ ಸಾಮಾಜಿಕ, ಧಾರ್ಮಿಕ ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸಲ್ಲಿಸಿದ ಅನನ್ಯ ಸೇವೆಗೆ ಅನೇಕ ರಾಷ್ಟ್ರೀಯ, ರಾಜ್ಯ ಮಟ್ಟದ ಪ್ರಶಸ್ತಿಗಳಿಂದ ಪುರಸ್ಕೃರಾಗಿದ್ದಾರೆ. ಇವರಿಗೆ “ಸಹಕಾರ ರತ್ನ ಪ್ರಶಸ್ತಿ” “ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ”, “ರಾಷ್ಟ್ರೀಯ ಬಸವಶ್ರೀ ಪ್ರಶಸ್ತಿ”, “ಸಮಾಜ ರತ್ನ ಪ್ರಶಸ್ತಿ””, “ಸಜ್ಜನ – ಚಂದನ ಸದ್ಭಾವನಾ ರಾಜ್ಯ ಪ್ರಶಸ್ತಿ”, “ಪರಿವರ್ತನಶ್ರೀ ರಾಜ್ಯ ಪ್ರಶಸ್ತಿ”, “ಭಾರತ ರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿ”, “ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -೨೦೨೩ ಪ್ರಶಸ್ತಿ”, “ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ”, ಜೊತೆಯಲ್ಲಿ ಸಂಘ -ಸಂಸ್ಥೆಗಳಲ್ಲಿ ಸಕ್ರೀಯವಾಗಿರುವ ಇವರನ್ನು ಹಲವಾರು ಸಹಕಾರ ಸಂಘ- ಸಂಸ್ಥೆಗಳು ಗುರುತಿಸಿ ಸನ್ಮಾನಿಸಿದೆ.
ಸಂಘದ ಸಕ್ರೀಯ ಚಟುವಟಿಕೆಯೊಂದಿಗೆ ಅಧ್ಯಕ್ಷರ ಕ್ರಿಯಾಶೀಲತೆಯು ಉಲ್ಲೇಖನೀಯ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಮೂರನೇ ಬಾರಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿರುವ ಇವರು, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ (ನಿ.) ಬೆಂಗಳೂರು ಇದರ ಆಡಳಿತ ಮಂಡಳಿಗೆ ಮೈಸೂರು ವಿಭಾಗದಿಂದ ಕರಾವಳಿ ಕ್ಷೇತ್ರ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ನಿರ್ದೇಶಕರಾಗಿ ಬಹುಮತದಿಂದ ಆಯ್ಕೆಯಾದವರು. ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ (ರಿ.) ಇದರ ಟ್ರಸ್ಟಿಯಾಗಿ, ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆ ಆಡಳಿತ ಮಂಡಳಿ ಸದಸ್ಯರಾಗಿ, ದ. ಕ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಮಂಗಳೂರು ಇದರ ನಿರ್ದೇಶಕರಾಗಿ ಆಯ್ಕೆ, ದ.ಕ. ಜಿಲ್ಲಾ ಸಗಟು ಮಾರಾಟ ಸಹಕಾರ ಸಂಘ ಇದರ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ಮುಂದಾಳತ್ವದಲ್ಲಿ ಮಹಿಳಾ ಸಬಲೀಕರಣ ದೃಷ್ಟಿಯಿಂದ ಮಾಡುತ್ತಿರುವ ಸೇವೆ ಅನನ್ಯ. ಸಂಘದ ವಿಶೇಷತೆ ಶೇ.100 ರಷ್ಟು ಹಿಂದುಳಿದ ವರ್ಗಕ್ಕೆ ಸೇರಿದ ಸಿಬ್ಬಂದಿಗಳು ಉದ್ಯೋಗದಲ್ಲಿದ್ದು, ಇದರಲ್ಲಿ ಶೇ.60 ರಷ್ಟು ಏಕ ಪೋಷಕರನ್ನು ಹೊಂದಿದ್ದು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಿಂದ ಸ್ವಚ್ಚತಾ ಸಿಬ್ಬಂದಿಯವರೆಗೆ ಸಂಘದಲ್ಲಿ ಶೇ.95 ರಷ್ಟು ಮಹಿಳಾ ಸಿಬ್ಬಂದಿಗಳೇ ಇದ್ದು ಮಹಿಳೆಯರ ಮುಖಾಂತರ ಸಂಘದ ವ್ಯವಹಾರ ನಡೆಸುತ್ತಿರುವುದು ಅನುಕರಣೀಯ. ಚಿತ್ತರಂಜನ್ ಬೋಳಾರ್ ಅವರು ಆತ್ಮಶಕ್ತಿ ಸಹಕಾರಿ ಸಂಘ ಹಾಗೂ ಇತರ ಸಂಘಗಳ ಮೂಲಕ ಸುಮಾರು 50ಕ್ಕೂ ಮಿಕ್ಕಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಆ ಮೂಲಕ 580ಕ್ಕೂ ಮಿಕ್ಕಿ ಕಣ್ಣಿನ ಕ್ಯಾಟ್ರಾಕ್ಟ್ ಚಿಕಿತ್ಸೆ, ಉಚಿತ ಔಷಧಿ, ಶಸ್ತç ಚಿಕಿತ್ಸಾ ವೆಚ್ಚ ಹಾಗೂ 15,000ಕ್ಕೂ ಮಿಕ್ಕಿ ಕನ್ನಡಕವನ್ನೂ ಉಚಿತವಾಗಿ ವಿತರಿಸಿರುವುದಷ್ಟೇ ಅಲ್ಲದೇ ಉಚಿತ ಆರೋಗ್ಯ ಕಾರ್ಡನ್ನು ಬಡ ಕುಟುಂಬಗಳಿಗೆ ಪ್ರತಿ ವರ್ಷ ವಿತರಿಸುವುದು. ಅಸಹಾಯಕ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಪ್ರತಿ ವರ್ಷ ಸರಕಾರಿ ಕಾಲೇಜುಗಳಿಗೆ ನೇರವಾಗಿ ವಿದ್ಯಾರ್ಥಿಗಳ ದಾಖಲಾತಿ ಮತ್ತು ಪರೀಕ್ಷಾ ಶುಲ್ಕಗಳನ್ನು ಪಾವತಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಶಕ್ತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮೂಲಕ ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಪ್ರೇರಣಾ ಶಿಬಿರವನ್ನು ಕಳೆದ ೮ ವರ್ಷದಿಂದ ಆಯೋಜಿಸಿ ಸುಮಾರು 100 ಬಡ ಅರ್ಹ ವಿದ್ಯಾರ್ಥಿಗಳನ್ನು ಈ ಶಿಬಿರದಿಂದ ಆಯ್ಕೆ ಮಾಡಿ ಅವರಿಗೆ ಉಚಿತವಾಗಿ ಐಎಎಸ್/ಐಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಗವಹಿಸಲು ಉಚಿತ ತರಬೇತಿ ನೀಡುವುದರ ಜೊತೆಗೆ ಸರ್ಕಾರಿ ಪ್ರೌಡ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮಾದರಿ ಪ್ರಶ್ನೋತ್ತರಗಳನ್ನು ದಿನಪತ್ರಿಕೆಗಳ ಸಹಯೋಗದೊಂದಿಗೆ ವಿತರಿಸುತ್ತಾ ಬರುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು