ಇತ್ತೀಚಿನ ಸುದ್ದಿ
ವೃದ್ಧ ಮಹಿಳೆಯ ಮೇಲೆ ಹರಿದ ಸರಕಾರಿ ಬಸ್: ಚಾಲಕನ ಅತಿ ವೇಗ ತಂದ ಆಪತ್ತು; ಸ್ಥಳದಲ್ಲೇ ಕೊನೆಯುಸಿರೆಳೆದ ಹಿರಿಯ ಜೀವ
22/06/2024, 21:59
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ನಂಜನಗೂಡು ಪಟ್ಟಣದ ಚಾಮರಾಜ ನಗರ ಬೈಪಾಸ್ ರಸ್ತೆಯ ಮೇದರಗೇರಿ ಬಳಿ ರಸ್ತೆ ದಾಟುತ್ತಿದ್ದ ವೃದ್ಧ ಮಹಿಳೆಯ ಮೇಲೆ ಕೆಎಸ್ಸಾರ್ಟಿಸಿ ಬಸ್ಸು ಹರಿದು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೇದರ ಬೀದಿಯ ನಿವಾಸಿ 75 ವರ್ಷದ ಪಾರ್ವತಮ್ಮ ಮೃತ ದುರ್ದೈವಿಯಾಗಿದ್ದಾಳೆ.
ಬೆಳಂ ಬೆಳಗ್ಗೆ ಚಾಮರಾಜನಗರ ಕಡೆಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಅತಿ ವೇಗವಾಗಿ ಬಂದು ವೃದ್ಧೆ ಪಾರ್ವತಮ್ಮ ಮೇಲೆ ಹರಿದಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಚಾಲಕನ ಅತಿ ವೇಗ ಹಾಗೂ ಅಜಾಗರುಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದರಾಜು ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಚಾಲಕನನ್ನು ವಶಕ್ಕೆ ಪಡೆದುಕೊಂಡ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.