ಇತ್ತೀಚಿನ ಸುದ್ದಿ
ಮಳೆಗಾಲದ ಅನಿರೀಕ್ಷಿತ ಅನಾಹುತ ಎದುರಿಸಲು ಜಿಲ್ಲಾಡಳಿತ ಸಜ್ಜು: ಪಾಲಿಕೆಯಿಂದ ಕಂಟ್ರೋಲ್ ರೂಂ
24/06/2024, 19:06
ಮಂಗಳೂರು(reporterkarnataka.com): ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಮುನ್ಸೂಚನೆಯಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಅನಿರೀಕ್ಷಿತ ಅನಾಹುತಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ.
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪ್ರಾಕೃತಿಕ ವಿಕೋಪದ ಸಮಸ್ಯೆಗಳಿಗೆ ಪಾಲಿಕೆಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ. ದೂರವಾಣಿ ಸಂಖ್ಯೆ 0824 -2220306 ಅಥವಾ ವಾಟ್ಸಾಪ್ ಸಂಖ್ಯೆ 9449007722 ಸಂಪರ್ಕಿಸಿ ಸಾರ್ವಜನಿಕರು ಮಳೆಯಿಂದ ಉಂಟಾದ ಯಾವುದೇ ಸಮಸ್ಯೆಗಳನ್ನು ಪರಿಹರಿಸಬಹುದಾಗಿದೆ ಎಂದು ಮಹಾನಗರಪಾಲಿಕೆ ಪ್ರಕಟಣೆ ತಿಳಿಸಿದೆ.