6:53 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರು ನಗರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯಿಂದ ಆಶ್ರಮವಾಸಿಗಳಿಗೆ ದಿನಸಿ ಕಿಟ್ ವಿತರಣೆ

21/08/2021, 16:25

ಮಂಗಳೂರು(reporterkarnataka.com):   ಮಂಗಳೂರು ನಗರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿಗಳಾಗಿದ್ದ ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ನಗರದ ಕಾಪಿಕಾಡ್ ಬಳಿಯಿರುವ “ಸ್ನೇಹ ದೀಪ” ಆಶ್ರಮದಲ್ಲಿ ಆಶ್ರಮವಾಸಿಗಳಿಗೆ ದಿನಸಿ ಕಿಟ್ ಗಳನ್ನು ವಿತರಿಸುವ  ಮೂಲಕ ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಪ್ರಕಾಶ್  ಬಿ. ಸಾಲ್ಯಾನ್ ಮಾತನಾಡಿ, ದಿವಂಗತ ರಾಜೀವ್ ಗಾಂಧಿಯವರು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿದ ಅಭೂತಪೂರ್ವ ಸಾಧನೆ ಹಾಗೂ ದಿ. ದೇವರಾಜ್ ಅರಸು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಉಳುವವನಿಗೆ  ಭೂ ಒಡೆತನದ ಹಕ್ಕನ್ನು ನೀಡುವ ಮೂಲಕ ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ  ಕಾರ್ಯ ಮಾಡಿದವರು ಎಂದು ಹೇಳಿದರು.

ಮಾಜಿ ಮೇಯರ್ ಮಹಾಬಲ ಮಾರ್ಲ, ಮಾಜಿ ಉಪಮೇಯರ್ ರಜನೀಶ್ ಕಾಪಿಕಾಡ್,  ಸ್ನೇಹ ದೀಪ ಆಶ್ರಮದ ಅಧ್ಯಕ್ಷ ತಪಸಂ, 
ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಾಕೇಶ್ ದೇವಾಡಿಗ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲಾರೆನ್ಸ್ ಡಿಸೋಜ, ನಗರ ಬ್ಲಾಕ್ ಪ್ರಧಾನ ಕಾರ್ಯದಶಿ ಯೋಗೀಶ್ ನಾಯಕ, ನಗರ ಬ್ಲಾಕ್ ಕಾರ್ಮಿಕ ಅಧ್ಯಕ್ಷ ಜಯರಾಜ್ ಕೋಟ್ಯಾನ್ ,ವಾರ್ಡ್ ಅಧ್ಯಕ್ಷ ರಾಜೇಂದ್ರ ಚಿಲಿಂಬಿ, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರುಗಳಾದ ಪ್ರವೀಣ್ ಚಂದ್ರ ಆಳ್ವ, ಅನಿಲ್ ಕುಮಾರ್, ನಗರ ಬ್ಲಾಕ್  ಕಿಸಾನ್ ಘಟಕದ ಅಧ್ಯಕ್ಷ ರಿತೇಶ್ ಅಂಚನ್, ನಗರ ಬ್ಲಾಕ್ ಪರಿಶಿಷ್ಟ ಘಟಕದ ಅಧ್ಯಕ್ಷ ಮಿಥುನ ಉರ್ವಾ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿನಿರಜ್ ಪಾಲ್, ಲಕ್ಷ್ಮಣ್ ಶೆಟ್ಟಿ,ಗಿರೀಶ್ ಶೆಟ್ಟಿ, ಶೇಕ್ ಕೈಫ್, ಉದಯ್ ಆಚಾರ್, ಫಯಾಜ್ ,ಇಸ್ಮಾಯಿಲ್, ಕ್ಲಿಪ್ಬೋರ್ಡ್ ಸೊನ್ಸ್, ಸಂಶುದ್ದೀನ್ ಬಂದರ್ 
ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ  ರಾಕೇಶ್ ದೇವಾಡಿಗ ಸ್ವಾಗತಿಸಿದರು. ವಾರ್ಡ್ ಅಧ್ಯಕ್ಷ ರಾಜೇಂದ್ರ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಸಮರ್ಥ ಭಟ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು