11:24 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ನಂಜನಗೂಡು: ಶಾಲಾ ನೂತನ ಕೊಠಡಿ ಸೋರಿಕೆ; ಅಧಿಕಾರಿಗಳಿಗೆ ಛೀಮಾರಿ ಹಾಕಿದ ಗ್ರಾಮಸ್ಥರು!

24/06/2024, 22:04

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹಣದ ದುರಾಸೆಗೆ ಗುತ್ತಿಗೆದಾರ ಮತ್ತು ಇಂಜಿನಿಯರ್ ಮಾಡಿದ ಎಡವಟ್ಟಿನಿಂದ ಶಾಲಾ ಮಕ್ಕಳು ಕೂತು ಪಾಠ ಕೇಳುವ ನೂತನ ಶಾಲಾ ಕೊಠಡಿ ಕಾಮಗಾರಿ ಮಳೆಗೆ ಸೋರುವಂತಾಗಿದೆ.
ಸಂಬಂಧಪಟ್ಟ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಗ್ರಾಮಕ್ಕೆ ಬರಮಾಡಿಕೊಂಡು ಗ್ರಾಮಸ್ಥರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಂಜನಗೂಡು ತಾಲೂಕಿನ ಇಬ್ಜಾಲ ಗ್ರಾಮದಲ್ಲಿ ನಡೆದಿದೆ.
2022-23ರ ಸಾಲಿನ ಅವಧಿಯಲ್ಲಿ ನಂಜನಗೂಡಿನ ಮಾಜಿ ಶಾಸಕ ಹರ್ಷವರ್ಧನ್ ಅವರ ಅವಧಿಯಲ್ಲಿ ಶಾಲಾ ಕೊಠಡಿಗಳ ಅಭಿವೃದ್ಧಿಗೆ 50 ಕೋಟಿಗೂ ಅಧಿಕ ಹಣವನ್ನು ಮಂಜೂರು ಮಾಡಿಸಿದ್ದರು.
ಜಿಲ್ಲಾ ಪಂಚಾಯಿತಿಯ ಎಂಜಿನಿಯರ್ ಇಲಾಖೆಯವರಿಗೆ ಕಾಮಗಾರಿಯ ಜವಾಬ್ದಾರಿಯನ್ನ ವಹಿಸಲಾಗಿತ್ತು. ನಂಜನಗೂಡು ತಾಲೂಕಿನ ಇಬ್ಜಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗೆ 14 ಲಕ್ಷಗಳ ಹಣವನ್ನು ಮಂಜೂರು ಮಾಡಿ ಜಿಪಂ ಎ ಇ ಇ ವೆಂಕಟೇಶ್ ಎಂಬುವರು ನಂಜನಗೂಡಿನ ಸ್ಥಳೀಯ ಗುತ್ತಿಗೆದಾರ ವ್ಯಕ್ತಿ ಒಬ್ಬರಿಗೆ ಯಾವುದೇ ಟೆಂಡರಿಲ್ಲದೆ ಕಾಮಗಾರಿಯ ಜವಾಬ್ದಾರಿ ವಹಿಸಿದ್ದರು.
ನೂತನ ಶಾಲಾ ಕೊಠಡಿ ಪೂರ್ಣಗೊಳ್ಳುವ ಮುನ್ನವೇ ಸಣ್ಣ ಪ್ರಮಾಣದ ಮಳೆ ಬಿದ್ದರೂ ಮೇಲ್ಚಾವಣಿ ಸೋರುತ್ತಿರುವ ಕಾರಣ ಇಬ್ಜಾಲ ಗ್ರಾಮಸ್ಥರು ಶಾಸಕ ದರ್ಶನ್ ಧ್ರುವನಾರಾಯಣ್ ಅವರ ಗಮನಕ್ಕೆ ವಿಚಾರ ಮುಟ್ಟಿಸಿದ್ದರು.
ಶಾಸಕರು ಕೂಡ ಸಂಬಂಧಪಟ್ಟ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಿ ಇಂಜಿನಿಯರ್ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೂ ತರಲಾಗಿತ್ತು.
ಇಬ್ಜಾಲ ಗ್ರಾಮಸ್ಥರು ನಂಜನಗೂಡು ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್ ಮತ್ತು ಇಂಜಿನಿಯರ್ ಈರಯ್ಯ ಎಂಬುವರನ್ನು ಸೋರುತ್ತಿರುವ ಕೊಠಡಿ ಬಳಿ ಬರಮಾಡಿಕೊಂಡು ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರ ಮಾತಿಗೆ ಉತ್ತರಿಸಲಾಗದ ಅಧಿಕಾರಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ನಂತರ ಮಾತನಾಡಿದ ಗ್ರಾಮಸ್ಥರು ಕಟ್ಟಡ ನಿರ್ಮಾಣದ ಸಂದರ್ಭದಲ್ಲಿ ಅಡಿಪಾಯವನ್ನು ಸರಿಯಾದ ರೀತಿಯಲ್ಲಿ ನಿರ್ಮಾಣ ಮಾಡದೇ ಕಳಪೆ ಪ್ರಮಾಣದಲ್ಲಿ ಸಿಮೆಂಟ್ ಮತ್ತು ಗುಣಮಟ್ಟದ ಡಸ್ಟ್ ಬಳಕೆ ಮಾಡದೆ ಇರುವುದು ಕಂಡುಬಂದ ಕೂಡಲೆ ಗುತ್ತಿಗೆದಾರನಿಗೆ ವಿಚಾರ ಮುಟ್ಟಿಸಿದವು. ಮೇಲ್ಚಾವಣಿ ಕಾಮಗಾರಿ ಮಾಡುತ್ತಿರುವ ಸಂದರ್ಭದಲ್ಲಿ ಗೋಡೆಗಳು ಅಲುಗಾಡುತ್ತಿದ್ದವು. ಇದನ್ನು ಕಂಡು ಕೂಡಲೇ ಕಾಮಗಾರಿಯನ್ನು ಸ್ಥಗಿತ ಮಾಡಲು ಮನವಿ ಮಾಡಿದರೂ ಗುತ್ತಿಗೆದಾರ ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಣದ ದುರಾಸೆಗೆ ಬೇಕಾಬಿಟ್ಟಿ ಕಾಮಗಾರಿಯನ್ನು ನಿರ್ಮಾಣ ಮಾಡಿದ್ದಾರೆ. ಕಳಪೆ ಕಾಮಗಾರಿಯಿಂದಾಗಿ ಶಾಲಾ ಮಕ್ಕಳನ್ನು ಸಾವಿನ ಕೂಪಕ್ಕೆ ನೂಕು ವಂತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ಸಂಬಂಧಪಟ್ಟ ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು ಗುತ್ತಿಗೆದಾರ ಮತ್ತು ಜಿ.ಪಂ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು